Webdunia - Bharat's app for daily news and videos

Install App

ಅಫ್ಘಾನಿಸ್ತಾನ ಅದ್ಭುತ ಗೆಲುವು ಎಂದ ವಿರಾಟ್ ಕೊಹ್ಲಿಯನ್ನು ಟ್ರೋಲ್ ಮಾಡಿದ ಟ್ವಿಟರಿಗರು

Webdunia
ಸೋಮವಾರ, 24 ಜೂನ್ 2019 (09:53 IST)
ಲಂಡನ್: ದುರ್ಬಲ ಅಫ್ಘಾನಿಸ್ತಾನ ವಿರುದ್ಧ ಪ್ರಯಾಸಕರ ಗೆಲುವು ದಾಖಲಿಸಿದ ಬಳಿಕ ಇದೊಂದು ಅದ್ಭುತ ಗೆಲುವಾಗಿತ್ತು ಎಂದು ಟ್ವೀಟ್ ಮಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ.


ಅಫ್ಘಾನಿಸ್ತಾನ ವಿರುದ್ಧ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ಕೊಹ್ಲಿ ಬಳಗ ಬಳಿಕ 11 ರನ್ ಗಳಿಂದ ಪ್ರಯಾಸಕರ ಗೆಲುವು ಸಾಧಿಸಿತ್ತು. ಅದೂ  ಕೊನೆಯ ಓವರ್ ನಲ್ಲಿ ಮೊಹಮ್ಮದ್ ಶಮಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರಿಂದ ಗೆಲುವು ಸಾಧ್ಯವಾಗಿತ್ತು. ಈ ಗೆಲುವಿನ ಕ್ಷಣಗಳ ಫೋಟೋ ಪ್ರಕಟಿಸಿದ ಕೊಹ್ಲಿ ತಂಡದ ಪ್ರದರ್ಶನ ಕೊಂಡಾಡಿದ್ದಲ್ಲದೆ ಇದು ಅದ್ಭುತ ಗೆಲುವಾಗಿತ್ತು ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ಶಮಿ ಆ ಹ್ಯಾಟ್ರಿಕ್ ವಿಕೆಟ್ ಪಡೆಯದೇ ಇದ್ದಿದ್ದರೆ ಗೆಲುವು ಸಾಧ್ಯವಾಗುತ್ತಿರಲಿಲ್ಲ ಎಂಬುದನ್ನು ಮರೆಯಬೇಡಿ ಎಂದಿದ್ದಾರೆ. ಅಷ್ಟೇ ಅಲ್ಲದೆ, ಕೊನೆಯ ಓವರ್ ವರೆಗೂ ಇದು ಅಫ್ಘಾನಿಸ್ತಾನದ ಪಂದ್ಯವಾಗಿತ್ತು. ನಿಮ್ಮನ್ನು ಕಟ್ಟಿಹಾಕಲು ಅವರ ಶ್ರಮ  ಮರೆಯಬೇಡಿ ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments