Publish Date: Tue, 20 Feb 2018 (10:24 IST)
Updated Date: Tue, 20 Feb 2018 (10:26 IST)
ಬೆಂಗಳೂರು: ಕರಾವಳಿಯ ಖ್ಯಾತನಾಮರೆನಿಸಿಕೊಂಡವರೂ ಇಲ್ಲಿನ ಗ್ರಾಮೀಣ ಕ್ರೀಡೆ ಬಗ್ಗೆ ಧ್ವನಿಯೆತ್ತಿದ್ದು ಕಡಿಮೆ. ಆದರೆ ದೆಹಲಿ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಂಬಳದ ಬಗ್ಗೆ ಮಾತನಾಡಿದ್ದಾರೆ.
ಕಂಬಳ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಬೀಳಲಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಸೆಹ್ವಾಗ್ ಗ್ರಾಮೀಣ ಕ್ರೀಡೆಗೆ ಉತ್ತೇಜನ ಸಿಗುತ್ತಿರುವುದು ಖುಷಿಯ ಸಂಗತಿ ಎಂದಿದ್ದಾರೆ.
ಪ್ರಾಣಿ ಹಿಂಸೆ ನೆಪದಲ್ಲಿ ಈ ಗ್ರಾಮೀಣ ಕ್ರೀಡೆಯನ್ನು ನಿಷೇಧಿಸಲು ಹೊರಟಿದ್ದ ಕೆಲವು ಮನಸ್ಸುಗಳಿಗೆ ಬ್ರೇಕ್ ಬಿದ್ದಿರುವುದು ಖುಷಿಯ ಸಂಗತಿ. ಕರ್ನಾಟಕದ ಗ್ರಾಮೀಣ ಕ್ರೀಡೆಯಾಗಿ ಕಂಬಳಕ್ಕೆ ಮಾನ್ಯತೆ ಸಿಗುತ್ತಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ