Publish Date: Tue, 07 Nov 2017 (09:48 IST)
Updated Date: Tue, 07 Nov 2017 (09:50 IST)
ಮುಂಬೈ: ಟಿ20 ಮಾದರಿ ಕ್ರಿಕೆಟ್ ನಲ್ಲಿ ಧೋನಿ ಬ್ಯಾಟಿಂಗ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಮಾದರಿಯಿಂದ ನಿವೃತ್ತರಾಗುವುದೇ ಒಳಿತು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
ಧೋನಿ ನ್ಯೂಜಿಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ನೋಡಿ ಸಾಕಷ್ಟು ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಅವರಿನ್ನು ಯುವ ಕ್ರಿಕೆಟಿಗರಿಗೆ ತಮ್ಮ ಸ್ಥಾನ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
ಇದರ ಬೆನ್ನಲ್ಲೇ ಲಕ್ಷ್ಮಣ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿರು ಮಾದರಿಯಲ್ಲಿ ಯುವ ಕ್ರಿಕೆಟಿಗರಿಗೆ ಅವಕಾಶ ಮಾಡಿಕೊಡಲಿ. ಆದರೆ ಏಕದಿನ ಕ್ರಿಕೆಟ್ ನಲ್ಲಿ ಧೋನಿ ಮುಂದುವರಿಯಬೇಕು ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ