Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು…?

ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು…?
ನವದೆಹಲಿ , ಗುರುವಾರ, 25 ಜನವರಿ 2018 (05:56 IST)
ನವದೆಹಲಿ : ವಿದೇಶಿ ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ ತಂಡ ಟೀಕೆಗೆ ಗುರಿಯಾಗಿದ್ದು, ಅದರಲ್ಲೂ ವಿರಾಟ್ ಕೊಹ್ಲಿ ಅವರ  ನಾಯಕತ್ವದ ಬಗ್ಗೆ ಹಲವರು  ಟೀಕಿಸಿದ್ದರು. ಆದರೆ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಮಾತ್ರ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

 
ವಿರಾಟ್ ಅವರಿಗೆ ನಾಯಕತ್ವದಲ್ಲಿ ತಾಳ್ಮೆಯಿಂದ ಇರುವಂತೆ ಗಂಗೂಲಿ ಅವರು ಸಲಹೆ ನೀಡಿದ್ದಾರೆ. ಕೊಹ್ಲಿ ಅವರು ನಾಯಕತ್ವವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಾರೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.’ ಯಾರು ಕೂಡ ಜನ್ಮತಃ ನಾಯಕರಾಗುವುದಿಲ್ಲ. ಹಾಗಾಗಿ ನಾಯಕರಿಗೂ ಅಭಿವೃದ್ಧಿ ಹೊಂದಲು ಅವಕಾಶ ನೀಡಬೇಕು. ಕೊಹ್ಲಿ ಸುಧಾರಣೆ ಬಗ್ಗೆ ನನಗೆ ಮನವರಿಕೆಯಿದೆ. ನಾಯಕನಾದವನ್ನು ನಿರ್ವಹಣೆ ನೀಡಬೇಕಾಗಿರುವುದು ಅತಿ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಕೊಹ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಕ್ರಿಕೆಟ್ ತಂಡಕ್ಕೆ ಸಚಿನ್ ತೆಂಡುಲ್ಕರ್ ಹೇಳಿದ ಕಿವಿಮಾತೇನು ಗೊತ್ತಾ...?