Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಜತೆಗಿನ ಭಿನ್ನಾಭಿಪ್ರಾಯದ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಹೇಳಿದ್ದೇನು?

Webdunia
ಭಾನುವಾರ, 4 ಜೂನ್ 2017 (09:03 IST)
ಲಂಡನ್: ಇತ್ತೀಚೆಗಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಮತ್ತು ನಾಯಕನ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

 
ಪಾಕಿಸ್ತಾನದ ಜತೆಗಿನ ಪಂದ್ಯಕ್ಕೆ ಮುನ್ನ ಪತ್ರಿಕಾಗೋಷ್ಠಯಲ್ಲಿ ಮಾತನಾಡುವಾಗ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತೆ ತಮ್ಮ ನಡುವೆ ಅಂತಹ ವೈಮನಸ್ಯವೇನೂ ಇಲ್ಲ. ನಾವು ಚೆನ್ನಾಗಿಯೇ ಇದ್ದೇವೆ ಎಂದಿದ್ದಾರೆ.

‘ಒಂದು ಮನೆಯೆಂದ ಮೇಲೆ ಅಲ್ಲಿ ಎಲ್ಲರ ಅಭಿಪ್ರಾಯಗಳು ಒಂದೇ ರೀತಿ ಇರಲು ಸಾಧ್ಯವಿಲ್ಲ. ಅದೇ ರೀತಿ ಒಂದು ತಂಡವೆಂದ ಮೇಲೆ ಎಲ್ಲಾ ಸಂದರ್ಭದಲ್ಲೂ ಎಲ್ಲರದ್ದೂ ಒಂದೇ ರೀತಿಯ ಅಭಿಪ್ರಾಯವಿರಬೇಕೆಂದಿಲ್ಲ. ಹಾಗಿರುವಾಗ ಅಂತಹ ಅಭಿಪ್ರಾಯ ಬೇಧಗಳೇ ದೊಡ್ಡ ವಿಷಯವಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ.

ಈಗ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ಈಗಲೂ ಇದು ನಿಮ್ಮ ತಪ್ಪು ಕಲ್ಪನೆಯಾಗಿತ್ತು ಎಂದು ಒಪ್ಪಿಕೊಳ್ಳಲು ಸಿದ್ಧರಿರುವುದಿಲ್ಲ. ನನ್ನ ಸ್ಪಷ್ಟನೆ ಎಂದಷ್ಟೇ ಪರಿಗಣಿಸುತ್ತೀರಿ. ಅಸಲಿಗೆ ಕುಂಬ್ಳೆ ಜತೆಗಿನ ಒಂದು ವರ್ಷದ ಪಯಣ ಅದ್ಭುತವಾಗಿಯೇ ಇತ್ತು. ಅಂತಹ ಸಮಸ್ಯೆಗಳೇನೂ ನಮ್ಮ ನಡುವೆ ಇಲ್ಲ’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಅಷ್ಟಕ್ಕೂ ಇಂತಹ ವಿವಾದಗಳ ಬಗ್ಗೆ ಅವರು ತಲೆಕೆಡಿಸಿಲ್ಲವಂತೆ. ಸದ್ಯಕ್ಕೆ ನಮ್ಮ ಗಮನ ಚಾಂಪಿಯನ್ಸ್ ಟ್ರೋಫಿಯತ್ತ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments