Publish Date: Mon, 22 Jan 2018 (06:39 IST)
Updated Date: Mon, 22 Jan 2018 (07:04 IST)
ನವದೆಹಲಿ : ಶನಿವಾರ ಶಾರ್ಜಾದಲ್ಲಿ ನಡೆದ ಅಂಧರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಕ್ಕಾಗಿ ಟೀ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡುಲ್ಕರ್ ಅವರು ಸೇರಿದಂತೆ ಹಲವು ಕ್ರಿಕೆಟಿಗರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸಚಿನ್ ಅವರು ‘ಅರ್ಪಣಾ ಮನೋಭಾವ ನಿಮ್ಮನ್ನು ಎಲ್ಲವೂ ಸಾಧಿಸಲು ನೆರವಾಗಲಿದೆ. ಹಾಗೆ ಇಡೀ ತಂಡಕ್ಕೆ ಒಂದು ದೊಡ್ಡ ಸೆಲ್ಯೂಟ್ ‘ ಎಂದು ಟ್ವೀಟ್ ಮಾಡಿದ್ದಾರೆ. ಹಾಗೆ ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಹಾಗು ಶಿಖರ್ ಧವನ್ ಅವರು ಸಹ ಅಭಿನಂದನೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ