Publish Date: Fri, 19 Jan 2018 (06:20 IST)
Updated Date: Fri, 19 Jan 2018 (06:32 IST)
ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ಆಟಗಾರರಲ್ಲೊಬ್ಬರಾದ ಕಪಿಲ್ ದೇವ್ ಅವರು ಯುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತನಗೆ ಹೋಲಿಸಬೇಡಿ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಕಪಿಲ್ ದೇವ್ ಅವರು ‘ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಪಾಂಡ್ಯ ಸಿಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ. ಹೀಗಾಗಿ ನನ್ನ ಜೊತೆ ಹೋಲಿಕೆ ಮಾಡಲು ಪಾಂಡ್ಯ ಯಾವುದೇ ಅರ್ಹತೆಯನ್ನು ಹೊಂದಿಲ್ಲ. ಯುವ ಆಟಗಾರ ಪಾಂಡ್ಯ ಉತ್ತಮ ಪ್ರತಿಭೆಯನ್ನು ಹೊಂದಿದ್ದಾರೆ. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಅವರು ಮೈದಾನದಲ್ಲಿ ಮಾನಸಿಕವಾಗಿ ಸದೃಢಗೊಳ್ಳಬೇಕಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ