Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಮಾಡಿದ ಅಪರೂಪದ ದಾಖಲೆ

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಮಾಡಿದ ಅಪರೂಪದ ದಾಖಲೆ
ಸೌಥಾಂಪ್ಟನ್ , ಭಾನುವಾರ, 20 ಜೂನ್ 2021 (10:02 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.


ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ (ಟೆಸ್ಟ್, ಏಕದಿನ, ಟಿ20) ಐಸಿಸಿ ವಿಶ್ವಕಪ್ ಫೈನಲ್ಸ್ ನಲ್ಲಿ ಆಡಿದ ಹೊಸ ದಾಖಲೆ ಮಾಡಿದ್ದಾರೆ. ಇದರ ಜೊತೆಗೆ ಕೊಹ್ಲಿ ಅಂಡರ್ 19 ವಿಶ್ವಕಪ್ ಫೈನಲ್ ನಲ್ಲೂ ಆಡಿದ್ದರು.

ಇನ್ನೊಂದಡೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಐಸಿಸಿಯ ಎಲ್ಲಾ ಉದ್ಘಾಟನಾ ವಿಶ್ವಕಪ್ ನ ಫೈನಲ್ಸ್ ನಲ್ಲಿ ಆಡಿದ ದಾಖಲೆ ಮಾಡಿದ್ದಾರೆ. ಇದಕ್ಕೆ ಮೊದಲು ರೋಹಿತ್ ಟಿ20 ವಿಶ್ವಕಪ್ ಉದ್ಘಾಟನಾ ಕೂಟದ ಫೈನಲ್ಸ್ ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆ ಫೈನಲ್ಸ್ ನಲ್ಲಿ ಭಾರತ ಐತಿಹಾಸಿಕ ಗೆಲುವು ದಾಖಲಿಸಿತ್ತು. ಇದೀಗ ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲೂ ಆಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ಟೆಸ್ಟ್ ಡ್ರಾ ಮಾಡಿಕೊಂಡ ಭಾರತೀಯ ವನಿತೆಯರು: ಸ್ನೇಹ ರಾಣಾ ದಾಖಲೆ