Select Your Language

Notifications

webdunia
webdunia
webdunia
webdunia

ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ ಪೂರೈಸಿದೆ

ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ ಪೂರೈಸಿದೆ
ಬೆಂಗಳೂರು , ಭಾನುವಾರ, 16 ಜನವರಿ 2022 (14:21 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದಲ್ಲಿ COVID-19 ವಿರುದ್ಧ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವು ಒಂದು ವರ್ಷವನ್ನು ಪೂರೈಸಿದೆ. ಈ ಸಲುವಾಗಿ ಇಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಪಿ.ಸಿ.ಮೋಹನ್ . ಮಾಜಿಮುಖ್ಯಮಂತ್ರಿ. ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್ ಅವರು ಲಸಿಕೆ ಅಭಿಯಾನವನ್ನು ಫ್ಲ್ಯಾಗ್-ಆಫ್ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ಪಿ.ಸಿ ಮೋಹನ್ ಅವರು,
 
ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆಯನ್ನು ಬೆಂಗಳೂರು ವೈದ್ಯಕೀಯ ಕಾಲೇಜಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳಾದ ಶ್ರೀಮತಿ ನಾಗರತ್ನ ಅವರಿಗೆ ನೀಡಲಾಗಿದ್ದು, ಕರ್ನಾಟಕದಲ್ಲಿ ವಯಸ್ಕ ಜನಸಂಖ್ಯೆಯ 80% ಕ್ಕಿಂತ ಹೆಚ್ಚು ಜನರು ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ. ಭಾರತದ ಅರ್ಹ ಜನಸಂಖ್ಯೆಯ 92% ಜನರು ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಮತ್ತು 70% ಕ್ಕಿಂತ ಹೆಚ್ಚು ಜನರು ಲಸಿಕೆಯನ್ನು ಪಡೆದಿದ್ದಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ವಾರಾಂತ್ಯದಲ್ಲಿ ಕರ್ಫ್ಯೂ : ಆತಂಕದಲ್ಲಿ ಕಾಫಿನಾಡು ಜನತೆ!