Webdunia - Bharat's app for daily news and videos

Install App

ಬಿಜೆಪಿ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಗ್ಗೆ ಹೊಸ ಬಾಂಬ್ ಸಿಡಿಸಿದ ಆನಂದ ನ್ಯಾಮಗೌಡ

Sampriya
ಭಾನುವಾರ, 25 ಆಗಸ್ಟ್ 2024 (10:41 IST)
Photo Courtesy X
ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಡಾ ಹಗರಣ, ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿ  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್‌ನ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ.

ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬ ಅಶ್ಲೀಲ ಸಿಡಿ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಬಂದಿದೆ ಎಂದು ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿ ಬರುವ ಸುದ್ದಿ ಬಂದಿದೆ. ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಕೈ ಕಾರ್ಯಕರ್ತರ ಎದುರು ಹೇಳಿದರು.

ಆ ಅಶ್ಲೀಲ‌ ಸಿಡಿಯಲ್ಲಿರುವುದು ಬಿಜೆಪಿಯ ಮಾಜಿ ಮುಖ್ಯಮಂತ್ರಿಯಂತೆ. ಶೀಘ್ರದಲ್ಲೇ ಆ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ ಗೆಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರತಿಭಟನಾ ಭಾಷಣದಲ್ಲಿ ನ್ಯಾಮಗೌಡ ಸಿಡಿ ಕುರಿತು ಹೇಳಿಕೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments