Webdunia - Bharat's app for daily news and videos

Install App

ಅಟ್ಲಂಟಾ ಸಂಸ್ಥೆಯಿಂದ 15 ಸಾವಿರ ಪುಸ್ತಕಗಳ ಕೊಡುಗೆ

Webdunia
ಸೋಮವಾರ, 28 ಜೂನ್ 2021 (20:41 IST)
ಅಮೇರಿಕಾದ ಅಟ್ಲಾಂಟಾ ವಿ-ಸ‌ರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ರೂಪಾಯಿ ಒಂದೂವರೆ ಕೋಟಿ ಮೌಲ್ಯದ‌ 15 ಸಾವಿರ ಅತ್ಯತ್ಕೃಷ್ಟ ಪುಸ್ತಕಗಳನ್ನು ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
ಸೋಮವಾರ ಸುದ್ದಿಗೋಷ್ಠಿಯಲ್ಲಿ ಪುಸ್ತಕಗಳನ್ನು ಇಲಾಖೆ ಪರವಾಗಿ ಸ್ವೀಕರಿಸಿ ಮಾತನಾಡಿದ ಅವರು, ವಿ-ಸರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಅಧ್ಯಕ್ಷ ಡಾ. ವಿಜಯರಾಘವನ್  ಅವರು ತಮ್ಮ ಸಂಸ್ಥೆಯಿಂದ ನೀಡಿದ ಮೌಲ್ಯಯುತ ಪುಸ್ತಕಗಳನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ರೋಟರಿ ಸಂಸ್ಥೆಯ ಜಿಲ್ಲಾ ಗೌರ್ನರ್ ಡಾ. ನಾಗೇಂದ್ರ ಪ್ರಸಾದ್ ನಗರ ಕೇಂದ್ರ ಗ್ರಂಥಾಲಯಕ್ಕೆ ಹಸ್ತಾಂತರಿಸಿದ್ದಾರೆ ಎಂದರು.
 
ಅಮೇರಿಕಾದ ಅಟ್ಲಾಂಟದಲ್ಲಿ ಎ.ಕೆ. ಎಜು-ಸ್ಯಾಟ್  ಸಂಸ್ಥೆಯು ಭಾರತದ ಇಸ್ರೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಭಾರತದಲ್ಲಿನ ಮೂಲಭೂತ ಸೌಕರ್ಯಗಳಿಲ್ಲದ ಕಟ್ಟಕಡೆಯ ಗ್ರಾಮಗಳಲ್ಲಿನ ಶಿಕ್ಷಣ ವಂಚಿತ ಮಕ್ಕಳಿಗೆ ಎ.ಕೆ. ಎಜು-ಸ್ಯಾಟ್  ಮೂಲಕ ಮೂಲಭೂತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾ‌ರ್ಯನಿರ್ವಹಿಸುತ್ತಿದ್ದು, ಅದರ ಭಾಗವಾಗಿ ಪುಸ್ತಕಗಳನ್ನು ಒದಗಿಸಿದೆ  ಎಂದು ಅವರು ಹೇಳಿದರು.
 
ಈ ಪುಸ್ತಕಗಳು ಅತ್ಯಂತ ಮೌಲ್ಯಯುತವಾಗಿದ್ದು, ಕ್ರೀಡೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ, ಶಾಸ್ತ್ರೀಯ ಹಾಗೂ ನವನವೀನ ಕಾದಂಬರಿಗಳು, ಪ್ರಸಿದ್ಧ ವ್ಯಕ್ತಿಗಳ ಜೀವನ ಚರಿತ್ರೆಗಳು, ಮಾಹಿತಿ ಮತ್ತುತಂತ್ರಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳು ಮತ್ತು ಮೆಕ್ಯಾನಿಕಲ್‍ಇಂಜಿನಿಯರಿಂಗ್ ಸೇರಿದಂತೆ ಹಲವಾರು ಪ್ರಾಕಾರದ ಪುಸ್ತಕಗಳನ್ನು ಒಳಗೊಂಡಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು.
 
ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ಅಮೇರಿಕಾದ ಅಟ್ಲಾಂಟಾದ ವಿ-ಸರ್ವ್ ಇಂಟರ್‍ನ್ಯಾಷನಲ್ ಫೌಂಡೇಷನ್ ಅಧ್ಯಕ್ಷ ವಿಜಯರಾಘವನ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಡಿಸ್ಟ್ರಿಕ್ ಗೌರ್ನರ್ ಶ್ರೀ ನಾಗೇಂದ್ರ ಪ್ರಸಾದ್ ಅವರಿಗೆ ಸುರೇಶ್ ಕುಮಾರ್ ಕೃತಜ್ಞತೆ ವ್ಯಕ್ತಪಡಿಸಿದರು.
 
ರಾಜ್ಯದ ಜನತೆ ಈ ಪುಸ್ತಕಗಳ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವರು ಕೋರಿದರು.
ಪುಸ್ತಕ ದಾನ ಅಭಿಯಾನ ಕಾರ್ಯಕ್ರಮದಲ್ಲಿ  ಬೆಂಗಳೂರು ರೋಟರಿ ಸಂಸ್ಥೆಯ ಗವನ೵ರ್   ನಾಗೇಂದ್ರ ಪ್ರಸಾದ್,   ರವಿಶಂಕರ್,   ಶ್ರೀನಿವಾಸಮೂರ್ತಿ, ಅರುಣ್ ಬೇಲೂರ್,   ನೀಲ್‍ಜೋಸೆಫ್,    ರಿತೇಶ್‍ಗೋಯಲ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ ಎಸ್. ಹೊಸಮನಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments