Select Your Language

Notifications

webdunia
webdunia
webdunia
webdunia

ಸೈಕಲ್ ಫಾರ್ ಚೇಂಜ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ

ಸೈಕಲ್ ಫಾರ್ ಚೇಂಜ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ
bengaluru , ಗುರುವಾರ, 29 ಜುಲೈ 2021 (18:26 IST)
ಸ್ಮಾರ್ಟ್ ಸಿಟಿ ನಗರಗಳಲ್ಲಿ ಸೈಕಲ್ ಚಾಲನೆಗಾಗಿಯೇ ವಿಶೇಷ ಪಥಗಳನ್ನು ನಿರ್ಮಿಸಿದ್ದು, ಈ ಕುರಿತಾದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ನಮ್ಮ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯು ಪುರಸ್ಕಾರ ಪಡೆದುಕೊಂಡಿದೆ.
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲವಾಗಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿದ್ದ ಈ ಸೈಕಲ್ ಫಾರ್ ಚೇಂಜ್ ಸ್ಪರ್ಧೆಯಲ್ಲಿ 107 ಸ್ಮಾರ್ಟ್ ಸಿಟಿ ನಗರಗಳು ಪಾಲ್ಗೊಂಡಿದ್ದು ಸೈಕಲ್ ಸ್ನೇಹಿ ಪಥಗಳ ನಿರ್ಮಾಣದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ರಾಷ್ಟ್ರ ಮಟ್ಟದ ಪುರಸ್ಕಾರಕ್ಕೆ ಭಾಜನವಾಗಿದೆ ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಮುಖ್ಯಸ್ಥ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಸೈಕಲ್ ಚಾಲನೆಗಾಗಿಯೇ ಶಾಸ್ವತವಾದ ಪಥಗಳನ್ನು ನಿರ್ಮಿಸಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಸೈಕಲ್ ಚಾಲನೆ ಮತ್ತು ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಇನ್ನೂ ಹಲವು ಕ್ರಮಗಳನ್ನು ಕೈಗೊಂಡು ಬೆಂಗಳೂರು ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದೆಂದು  ರಾಕೇಶ್ ಸಿಂಗ್ ಹೇಳಿದ್ದಾರೆ.
ಸೈಕಲ್ ಬಳಕೆ ಉತ್ತೇಜಿಸುವ ಈ ಸ್ಪರ್ಧೆಯಲ್ಲಿ ಕೇಂದ್ರ ಸರ್ಕಾರದಿಂದ ಒಂದು ಕೋಟಿ ರೂಪಾಯಿಗಳ ಪುರಸ್ಕಾರವನ್ನು ಪಡೆದ ಹೆಮ್ಮೆ ನಮ್ಮ ಬೆಂಗಳೂರು ಸ್ಮಾರ್ಟ್ ಸಿಟಿಯದ್ದು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಶಿಕ್ಷಣ ನೀತಿ‌ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಕೋಲಾ ತಾಲ್ಲೂಕು ಕಚೇರಿಯಿಂದ ಪಾಲ್ಗೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮೀಸಲು: ಪ್ರಧಾನಿ ಮೋದಿ ಘೋಷಣೆ