ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ ಬೆಸ್ಕಾಂ

Webdunia
ಗುರುವಾರ, 15 ಜುಲೈ 2021 (15:24 IST)
ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಕರೆಯಲಾಗಿದ್ದು, ಆಯ್ಕೆಗೊಂಡವರು ರಾಜಧಾನಿಯಲ್ಲಿ ಕೆಲಸ ಮಾಡಬೇಕಿದೆ. ತರಬೇತಿ ಅವಧಿಯಲ್ಲಿ 5 ಮತ್ತು 7 ಸಾವಿರ ರೂ ಸ್ಟೈಫಂಡ್ ನೀಡಲಾಗುತ್ತದೆ ಎಂದು ಸಂಸ್ಥೆ ಕೇಂದ್ರ ಕಚೇರಿಯಿಂದ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
 
ಟೆಕ್ನಿಕಲ್ ಅಪ್ರೆಂಟಿಸ್ 75 ಹುದ್ದೆಗಳಿಗೆ ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು, ಗ್ರಾಜುಯೇಟ್ ಅಪ್ರೆಂಟಿಸ್ 325 ಹುದ್ದೆಗಳಿಗೆ ಬಿ.ಇ/ಬಿ. ಟೆಕ್ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದು. ಬೆಸ್ಕಾಂ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ನೇಮಕಾತಿ ಪರೀಕ್ಷೆಯ ಅಂಕ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
 
ಆಸಕ್ತರು ಬೆಸ್ಕಾಂ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಹೇಳಲಾಗಿದೆ. ವೆಬ್‌ಸೈಟ್‌ನಲ್ಲಿ ಸಂಪರ್ಕಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದು ಮಾಡುವುದು ಕಡ್ಡಾಯಮಾಡಿರುವುದಾಗಿ ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
 
ಜುಲೈ 15 ರಿಂದ 30ರ ತನಕ ಬೆಸ್ಕಾಂನ ಎನ್‌ಎಟಿಸ್ ಪೋರ್ಟಲ್‌ನಲ್ಲಿ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 5 ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ಆಗಸ್ಟ್ 16 ರಿಂದ 18ರ ತನಕ ಕಚೇರಿ  ಬೆಳಗ್ಗೆ 11 ರಿಂದ 4 ಗಂಟೆಯ ಸಮಯದಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಸಂಸ್ಥೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments