Publish Date: Tue, 05 Dec 2017 (20:57 IST)
Updated Date: Tue, 05 Dec 2017 (20:59 IST)
ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ನವದೆಹಲಿ ಭೇಟಿ ವೇಳೆಯಲ್ಲಿ ಕಾಂಗ್ರೆಸ್ ಅಧಿನಾಯಕ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಬ್ಯಾಲೆಟ್ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆಗಿದೆ. ಯಾರಿಗೆ ಮತ ಹಾಕಿದರೂ ಅದು ಬಿಜೆಪಿ ಹೋಗಿದೆ ಎಂದು ಬಿಎಸ್‍ಪಿ ಮಾಯಾವತಿ ಆರೋಪ ಮಾಡಿದ್ದರು. ಆದ್ದರಿಂದ ಕರ್ನಾಟಕದ ಚುನಾವಣೆಯಿಂದಲೇ ಇವಿಎಂ ಬಳಕೆ ನಿಲ್ಲಿಸಿ, ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಒತ್ತಡ ಹಾಕಲು ವಿಪಕ್ಷಗಳು ಚರ್ಚೆ ನಡೆಸಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.