ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ? ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು.
ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ ಒತ್ತಡ ಹೇರದಂತೆ ಈ ಸವಾಲನ್ನು ಎದುರಿಸಬೇಕಾಗಿದೆ.
ಲಾಕ್‍ಡೌನ್ ಜಾರಿಯಂತ ಕಠಿಣ ಪದ ಬಳಸುವುದು ಬೇಡ. ಈಗಷ್ಟೆ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ಲಾಕ್‍ಡೌನ್ ಮರುಜಾರಿಯಾದರೆ ಅನೇಕ ನಷ್ಟಕ್ಕೆ ಗುರಿಯಾಗ ಬೇಕಾಗುತ್ತದೆ. ಸೋಂಕು ಹರಡುವಿಕೆ ತಡೆಯಲು ಬೆಂಗಳೂರಿನಲ್ಲಿ ವಿಶೇಷ ಕ್ರಮ ಕೈಗೊಳ್ಳುವುದು ಅತ್ಯಂತ ಅವಶ್ಯಕ. ಮೊದಲೆರಡು ಅಲೆಗಳಂತೆ 3ನೇ ಅಲೆಗೂ ಕೂಡ ಬೆಂಗಳೂರೇ ಕೇಂದ್ರ ಸ್ಥಾನ. ನಿರೀಕ್ಷೆಗೂ ಮೀರಿದ ವೇಗದಲ್ಲಿ ಸೋಂಕು ಹರಡುತ್ತಿದೆ ಎಂದು ಹೇಳಿದರು
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!