Daily Horoscope

Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಡಿಕೆ ಶಿವಕುಮಾರ್‌ ಸರ್ಕಾರ

DCM DK Shivkumar
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವ ಅವಶ್ಯಕತೆಯಿಲ್ಲ ಎನ್ನುವ ಮೂಲಕ ಗ್ಯಾರಂಟಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 

ಗ್ಯಾರಂಟಿ ಪರಿಷ್ಕರಣೆ ಪೂರ್ವಭಾವಿಯಾಗಿ ಗ್ಯಾರಂಟಿ ಕಮಿಟಿ ಹಾಗೂ ಅಧಿಕಾರಿಗಳ ಜೊತೆ ಸಿಎಂ ಶುಕ್ರವಾರ ಸಭೆ ನಡೆಸಿದರು. 

ಗ್ಯಾರಂಟಿ ಯೋಜನೆಗೆ ಮರು ಅರ್ಜಿ ಸಲ್ಲಿಸುವಂತಿಲ್ಲ. ಹೊಸದಾಗಿ ಅರ್ಜಿ ಬದಲಾಗಿ ಮರುಪರಿಶೀಲನೆ ಮಾಡಲು ಸಭೆಯಲ್ಲಿ ಸರ್ಕಾರ ತೀರ್ಮಾನ ಮಾಡಿದೆ. 

ಈಗಿರುವ ಫಲಾನುಭವಿಗಳ ಮರು ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಮರು ಪರಿಶೀಲನೆ ಯಾರು ಮಾಡಬೇಕು, ಹೇಗೆ ಮಾಡಬೇಕು ಎಂಬುದನ್ನು ಮೂರು ದಿನದೊಳಗೆ ಅಂತಿಮಪಡಿಸಿ ತಿಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇನ್ನೂ ಗ್ಯಾರಂಟಿ ಯೋಜನೆಯಲ್ಲಿ ಒಬ್ಬ ಅರ್ಜ ಫಲಾನುಭವಿಗಳಿಗೆ ತೊಂದರೆಯಾಗಬಾರದು. ಅನರ್ಹ ಫಲಾನುಭವಿಗಳ ದುರುಪಯೋಗಕ್ಕೆ ಮಾತ್ರ ಬ್ರೇಕ್ ಹಾಕಬೇಕು ಎಂದು ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.

ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 21ರಿಂದ ಮತ್ತೇ ನಾಲ್ಕು ದಿನ ದಕ್ಷಿಣ ಕನ್ನಡ ಹವಾಮಾನದಲ್ಲಿ ಭಾರೀ ಬದಲಾವಣೆ, ಇಲ್ಲಿದೆ ಮಾಹಿತಿ