Select Your Language

Notifications

webdunia
webdunia
webdunia
webdunia

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪೌರಕಾರ್ಮಿಕ ಆತ್ಮಹತ್ಯೆ

grama panchayati
bengaluru , ಗುರುವಾರ, 5 ಆಗಸ್ಟ್ 2021 (14:26 IST)
ಕಳೆದ ಇಪ್ಪತ್ತು ವರ್ಷಗಳಿಂದ ಕಳಲೆ ಗ್ರಾಮ ಪಂಚಾಯ್ತಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರಂಗ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ವೇತನ ಬಾರದ ಹಿನ್ನಲೆ ಬೇಸತ್ತ ರಂಗ ಗ್ರಾಮ ಪಂಚಾಯಿತಿ ಕಚೇರಿಯ ಫ್ಯಾನಿಗೆ ಕೊರಳೊಡ್ಡಿ ರಂಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ ಪೌರಕಾರ್ಮಿಕರು ಮತ್ತು ಗ್ರಾಪಂ ಅಧ್ಯಕ್ಷೆ ರಾಜಮ್ಮ ನಡುವೆ ವೇತನ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಂತರ ಕಳಲೆ ಗ್ರಾ.ಪಂ. ಅಧಿಕಾರಿಗಳು ಊಟಕ್ಕೆ ತೆರಳಿದ ಸಂದರ್ಭದಲ್ಲಿ ರಂಗ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ  ಶಿವನಂಜಶೆಟ್ಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೋಷನ್ ಬೇಗ್ ಆಸ್ತಿ ಜಫ್ತಿ: ಆಸ್ತಿ ವಿವರ ಇಲ್ಲಿದೆ