Webdunia - Bharat's app for daily news and videos

Install App

ಜಾಮೀನು ಪ್ರತಿಗಾಗಿ ಕಾಯದೆ ಫಟಾಫಟ್ ಬಿಡುಗಡೆ

Webdunia
ಶನಿವಾರ, 17 ಜುಲೈ 2021 (11:02 IST)
ನವದೆಹಲಿ (ಜು.17):  ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ದೊರೆತರೂ ಆದೇಶದ ಪ್ರತಿಯು ಜೈಲಧಿಕಾರಿಗಳಿಗೆ ಸಿಗುವುದು ತಡವಾಗುವ ಕಾರಣ ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.

•ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಡಿಜಿಟಲ್ ಜಾಮೀನು
•ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ಕ್ರಮ

ಈ ಸಂಬಂಧ ಜೈಲಧಿಕಾರಿಗಳಿಗೆ ಜಾಮೀನು ಆದೇಶದ ಪ್ರತಿಯನ್ನು ಡಿಜಿಟಲ್ ರೂಪದಲ್ಲಿ ರವಾನಿಸುವ ವ್ಯವಸ್ಥೆಯನ್ನು ತಿಂಗಳೊಳಗೆ ಜಾರಿಗೆ ತರಲು ಸುಪ್ರೀಂಕೋರ್ಟ್ನ ಸೆಕ್ರೆಟರಿ ಜನರಲ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಆದೇಶ ನೀಡಿದೆ. ಈ ಆದೇಶ ಜಾರಿಗೆ ಬಂದ ನಂತರ ಜೈಲಧಿಕಾರಿಗಳಿಗೆ ಇಂಟರ್ನೆಟ್ ಮುಖಾಂತರ ಡಿಜಿಟಲ್ ರೂಪದಲ್ಲಿ ಜಾಮೀನು ಆದೇಶದ ಪ್ರತಿ ಲಭಿಸಲಿದ್ದು, ತಕ್ಷಣ ಆರೋಪಿಗಳನ್ನು ಬಿಡುಗಡೆ ಮಾಡಬಹುದಾಗಿದೆ.
ದೇಶದ್ರೋಹ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈ ಆದೇಶ ನೀಡುವ ವೇಳೆ ಮಹತ್ವದ ಅಭಿಪ್ರಾಯ ಪ್ರಕಟಿಸಿರುವ ನ್ಯಾ. ರಮಣ, ‘ಈ ಡಿಜಿಟಲ್ ಯುಗದಲ್ಲಿ ನಾವು ಇನ್ನೂ ಪಾರಿವಾಳದ ಮೂಲಕ ಪತ್ರ ಸಾಗಿಸುತ್ತಿದ್ದೇವೆ’ ಎಂದು ಕಿಡಿಕಾರಿದ್ದಾರೆ.
ಜಾಮೀನು ಆದೇಶವನ್ನು ಡಿಜಿಟಲ್ ರೂಪದಲ್ಲಿ ರವಾನಿಸಲು ಎಲ್ಲಾ ಜೈಲುಗಳಲ್ಲೂ ಇಂಟರ್ನೆಟ್ ಸಂಪರ್ಕ ಇದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ಹಿರಿಯ ವಕೀಲ ದುಷ್ಯಂತ ದವೆ ಅವರನ್ನು ನೇಮಿಸಿದೆ. ಈ ವಿಷಯವನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments