ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ಬಾಲಕಿಯನ್ನು ತಂದೆಯ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನೆಲಮಂಗಲದ ತ್ಯಾಮಗೊಂಡ್ಲು ಬಳಿಯ ಲಕ್ಕಪಹಳ್ಳಿಯಲ್ಲಿ ತಿಂಗಳ ಹಿಂದೆಯೇ ಈ ಕೊಲೆ ನಡೆದಿದ್ದು, ಹತ್ತನೇ ತರಗತಿ ಓದುತ್ತಿರುವ ಬಾಲಕಿ ಮನೆಬಿಟ್ಟು ಓಡಿಹೋಗಿದ್ದಳು. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ಮನಬಂದಂತೆ ಹೊಡೆದು ಸಾಯಿಸಿದ್ದಾನೆ, ನಂತರ ಬಾಲಕಿಯ ಶವವನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಆರೋಪಿ ಚಿಕ್ಕ ನರಸಿಂಹಯ್ಯನನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!