ಸಂದರ್ಭ ಬಂದಲ್ಲಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 21 ಆಗಸ್ಟ್ 2024 (14:48 IST)
ಕೊಪ್ಪಳ: ನಿಯಮ ಉಲ್ಲಂಘಿಸಿ ಗಣಿ ಕಂಪನಿಗೆ ಮಂಜೂರಾತಿ ನೀಡಿದ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಂದರ್ಭ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಬುಧವಾರ ಇಲ್ಲಿಗೆ ಸಮೀಪದ ಗಿಣಿಗೇರಿಯಲ್ಲಿರುವ ಎರ್ ಸ್ಕ್ರಿಪ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್‌ಡಿಕೆ ಅವರನ್ನು ಬಂಧಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರನ್ನು ಬಂಧಿಸುವ ಸಂದರ್ಭ ಬಂದರೆ ಬಂಧಿಸುವುದರಲ್ಲಿ ಹಿಂದೇಟು ಹಾಕುವುದಿಲ್ಲ. ಈಗ ಅಂಥ ಸನ್ನಿವೇಶ ಇಲ್ಲ ಎಂದು ಸ್ಪಷ್ಟಣೆ ನೀಡಿದರು.

ಇದೀಗ ಕುಮಾರಸ್ವಾಮಿಗೆ ಭಯ ಶುರುವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆ ಎನ್ನುವ ಆತಂಕ ಅವರಲ್ಲಿದೆ. ತನಿಖೆ ಮಾಡಿ‌ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವಂತೆ ಲೋಕಾಯುಕ್ತರು ಕೇಳಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೃಹತ್ ‌ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸೇರಿದಂತೆ ಅನೇಕರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments