Webdunia - Bharat's app for daily news and videos

Install App

ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಬೆಂಗಳೂರಿನಲ್ಲಿ

Webdunia
ಮಂಗಳವಾರ, 8 ಮಾರ್ಚ್ 2022 (14:51 IST)
ಬೆಂಗಳೂರು ನಗರದ ಮಲ್ಲೇಶ್ವರಂನ ಚೌಡಯ್ಯ ಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಉತ್ತರ ಜಿಲ್ಲಾ ಘಟಕವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಸಚಿವ ಅಶ್ವಥ್ ನಾರಾಯಣ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲು ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ ಸ್ತೀ ಉದ್ಯಮಿಗಳಿಗೆ ಯಾವುದೇ ಖಾತ್ರಿ ಇಲ್ಲದೆ 1 ಕೋಟಿ ರೂ.ವರೆಗೂ ಬ್ಯಾಂಕ್ ಸಾಲ ಕೊಡಲಾಗುತ್ತಿದೆ. ಜೊತೆಗೆ, ಮಹಿಳೆಯರೇ ತಯಾರಿಸುತ್ತಿರುವ ಉತ್ಪನ್ನಗಳಿಗೆ ಸರಕಾರವೇ ಇ-ಕಾಮರ್ಸ್ ವೇದಿಕೆಯನ್ನು ಒದಗಿಸಲಿದೆ. ಅಲ್ಲದೆ, ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ತರಹದ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಮಾರುಕಟ್ಟೆ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಶಿಕ್ಷಕಿಯರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಹೆಸರಾಂತ ವೈದ್ಯೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಮುಖಂಡರಾದ ಗಿರೀಶ್, ಚನ್ನೇಗೌಡ ಮುಂತಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ