Publish Date: Tue, 08 Mar 2022 (14:57 IST)
Updated Date: Tue, 08 Mar 2022 (15:58 IST)
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳಾ ಸ್ವ ಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಮೇಳವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಈ ಮೇಳಕ್ಕೆ ಸಿಎಂ ಬೊಮ್ಮಾಯಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್, ಶಾಸಕ ಅರುಣ ಶಾಹಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರದಾನ ಕಾರ್ಯದರ್ಶಿ ಡಾ. ಮಂಜುಳಾ ಮತ್ತು ಇತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸಿಎಂ ಸನ್ಮಾನ ಮಾಡಿದರು.