Select Your Language

Notifications

webdunia
webdunia
webdunia
webdunia

ಪ್ರವಾಹ ತಡೆಗೆ ಅತ್ಯಾಧುನಿಕ ಉಪಕರಣ ಖರೀದಿಗೆ ಸಿಎಂ ಸೂಚನೆ

rain
bengaluru , ಮಂಗಳವಾರ, 20 ಜುಲೈ 2021 (18:06 IST)
ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಮಂಗಳವಾರ ವಿವಿಧ ಜಿಲ್ಲೆಗಳ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಸಿಎಂ ವೀಡಿಯೊ ಸಂವಾದ ನಡೆಸಿದ್ದು, ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕಳೆದ 8 ದಿನಗಳಿಂದ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.
‘ನದಿ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲು ಕ್ರಮಕೈಗೊಳ್ಳಬೇಕು ಹಾಗೂ ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ  ಸ್ಥಳಾಂತರ ಮಾಡಬೇಕು. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: 5 ಜಿಲ್ಲೆಗಳಲ್ಲಿ ಶೇ.100ರಷ್ಟು ಫಲಿತಾಂಶ