Select Your Language

Notifications

webdunia
webdunia
webdunia
webdunia

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನ ಮೇಲೆ ಚಾಕು ಇರಿತ

lakshmi hebbalkar

Sampriya

ಬೆಳಗಾವಿ , ಮಂಗಳವಾರ, 6 ಜನವರಿ 2026 (16:41 IST)
Photo Credit X
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರ ಕಾರು ಚಾಲಕನಿಗೆ  ಚಾಕು ಇರಿದ ಘಟನೆ ವರದಿಯಾಗಿದೆ. 

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಧ್ಯಾಹ್ನ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ.

ಬೈಕ್ ಮೇಲೆ ಬಂದು ಇಬ್ಬರು ಕಿಡಿಗೇಡಿಗಳು ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ.

ಗಾಯಗೊಂಡ ಬಸವಂತ ಅವರನ್ನು ಕೂಡಲೇ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್‌ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಲವು ವರ್ಷಗಳಿಂದ ಬಸವಂತ ಕಡೋಲ್ಕರ್ ಮೃಣಾಲ್‌ ಅವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರೂರ್‌ ಕಾಲ್ತುಳಿತ: ನಟ, ರಾಜಕಾರಣಿ ವಿಜಯ್‌ಗೆ ಬಿಗ್‌ ಶಾಕ್‌