Publish Date: Sat, 25 Nov 2017 (12:06 IST)
Updated Date: Sat, 25 Nov 2017 (15:39 IST)
ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಹೊಸಪೇಟೆ ತಾಲ್ಲೂಕಿನ ಅಯ್ಯನಹಳ್ಳಿ ಗ್ರಾಮದ ಲಕ್ಷ್ಮೀ ಅವರಿಗೆ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮರಿಯಮ್ಮನ ಹಳ್ಳಿ ಬಳಿ ಹೋಗುವಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಸಿಬ್ಬಂದಿ ಅಂಬುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಇಬ್ಬರು ಗಂಡು ಮಕ್ಕಳಿಗೆ ಜನ್ಮ ನೀಡಿರುವ ಮಹಿಳೆಯನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.