ಬೆಂಗಳೂರು: ದೇಶದಾದ್ಯಂತ ನಾಳೆ ಪಲ್ಸ್ ಪೋಲಿಯೋ ಹಾಕಲಾಗುತ್ತದೆ. ಹೀಗಾಗಿ ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ನಾಳೆ ಎರಡು ಹನಿ ಪೋಲಿಯೋ ಡ್ರಾಪ್ಸ್ ಹಾಕಿಸಿ.
ದೇಶವನ್ನು ಪೋಲಿಯೋ ಮುಕ್ತಗೊಳಿಸುವ ದೃಷ್ಟಿಯಿಂದ ಪೋಲಿಯೋ ಲಸಿಕೆ ಅಭಿಯಾನ ನಡೆಸಲಾಗುತ್ತದೆ. ನಾಳೆಯಿಂದ ಕರ್ನಾಟಕದಾದ್ಯಂತ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.
ನಿಮ್ಮ ಮನೆಯ ಹತ್ತಿರದ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬಹುದು. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಂಡು ಪೋಲಿಯೋದಿಂ ಮುಕ್ತಿ ನೀಡಿ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ನಾಳೆ ಒಂದು ದಿನ ಅಂಗನವಾಡಿ ಕೇಂದ್ರಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು. ಇದಾದ ಬಳಿಕ ಎರಡು ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಿಸಿಕೊಳ್ಳದ ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಲಸಿಕೆ ನೀಡಲಿದ್ದಾರೆ.