Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ರೆಡ್ ಆಲರ್ಟ್!

ರಾಜ್ಯದಲ್ಲಿ ಇನ್ನು ಐದು ದಿನ ಭಾರೀ ಮಳೆ ಸಾಧ್ಯತೆ

ಕೊಡಗಿನಲ್ಲಿ ರೆಡ್ ಆಲರ್ಟ್!
Bangalore , ಶುಕ್ರವಾರ, 9 ಜುಲೈ 2021 (21:26 IST)
ಬೆಂಗಳೂರು (ಜು. 9): ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ, ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರಲ್ಲಿ ಕೂಡ ಇನ್ನೆರಡು ದಿನ ಗುಡುಗು ಮತ್ತು ಮಿಂಚಿನಿಂದ ಕೂಡಿದ ಭಾರೀ ಮಳೇಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.


ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 9-12ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
ಕೊಡಗು ಕರಾವಳಿಯಲ್ಲಿ ರೆಡ್ ಆಲರ್ಟ್
ಮುಂಗಾರು ಮಳೆ ಬಿರುಸು ಪಡೆಯುವ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಈಗಾಗಲೇ ಕೊಡಗಿನಲ್ಲಿ ರೆಡ್ ಆಲರ್ಟ್ಘೋಷಿಸಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜ. 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.ಕಲ್ಯಾಣ ಕರ್ನಾಟಕದಲ್ಲಿ ಕಳೆದ ವಾರ ಜೋರಿದ್ದ ಮಳೆ ಈ ವಾರ ಇಳಿಕೆಯಾಗಿದೆ. ಆದರೆ, ನೈರುತ್ಯ ಮುಂಗಾರಿನಲ್ಲಿ ಈ ಭಾಗಕ್ಕೆ ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮತ್ತು ತ್ರಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಜನಗಳೇ ಸ್ವಲ್ಪ ಯೋಚಿಸಿ?