Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರ ವಿರುದ್ಧ ಬೇಸರ

Webdunia
ಬುಧವಾರ, 2 ಮಾರ್ಚ್ 2022 (16:39 IST)
ನಾಳೆಯಿಂದಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ ಮೊದಲೇ ನಟ-ನಿರ್ದೇಶಕ-ನಿರ್ಮಾಪಕ ರಿಷಬ್​ ಶೆಟ್ಟಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
ರಿಷಬ್​ ಹೀಗೆ ಬೇಸರಗೊಳ್ಳಲು ಕಾರಣ ಈ ಸಲದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅವರ ನಿರ್ಮಾಣದ 'ಪೆದ್ರೊ' ಆಯ್ಕೆ ಆಗದಿರುವುದು. ಆ ಬಗ್ಗೆ ಅವರು ತಮ್ಮ ಬೇಸರವನ್ನು ಅಧಿಕೃತವಾಗಿ ಲಿಖಿತ ರೂಪದಲ್ಲೇ ಹಂಚಿಕೊಂಡಿದ್ದಾರೆ. ರಿಷಬ್​ ಶೆಟ್ಟಿ ಫಿಲ್ಮ್ಸ್​ ಎಂಬ ತಮ್ಮ ನಿರ್ಮಾಣ ಸಂಸ್ಥೆಯ ಅಧಿಕೃತ ಲೆಟರ್ ಹೆಡ್ ಮೂಲಕ ತಮ್ಮ ಅನಿಸಿಕೆಯನ್ನು ಅವರು ಹೇಳಿಕೊಂಡಿದ್ದಾರೆ.
 
'ನಮ್ಮ ನಿರ್ಮಾಣದ ಪೆದ್ರೊ ಸಿನಿಮಾ ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದು, ವಿಮರ್ಶಕರಿಂದಲೂ ಪ್ರಶಂಸೆ ಪಡೆದಿದೆ. ಆದರೆ ಪೆದ್ರೊ ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ..' ಎಂದು ಬರೆದುಕೊಂಡಿರುವ ಅವರು ಇದರಿಂದ ತಮಗೆ ಬೇಸರವಾಗಿದ್ದರೂ, ಆ ನೋವನ್ನು ನುಂಗಿಕೊಂಡು ತಮ್ಮ ಪೆದ್ರೊ ಚಿತ್ರವನ್ನು ಸಿನಿಪ್ರಿಯರಿಗೆ ತಲುಪಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments