Select Your Language

Notifications

webdunia
webdunia
webdunia
webdunia

ರೂಪದರ್ಶಿಗೆ ಲೈಂಗಿಕ ಕಿರುಕುಳ?

ರೂಪದರ್ಶಿಗೆ ಲೈಂಗಿಕ  ಕಿರುಕುಳ?
ಬೆಂಗಳೂರು , ಗುರುವಾರ, 19 ಜನವರಿ 2017 (07:24 IST)
ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ರೂಪದರ್ಶಿಯ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
 
ಈ ಕುರಿತಂತೆ ರೂಪದರ್ಶಿ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಳಿ ರೂಪದರ್ಶಿಯನ್ನು ಸಂಪರ್ಕಿಸಿದಾಗ ಅವರು ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸಿಲ್ಲ. 
 
ಮತ್ತೀಗ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಆಕೆಗೆ ನೋಟಿಸ್ ಜಾರಿ ಮಾಡಿದ್ದಾರೆ.
 
ಇನ್ನೊಂದೆಡೆ ಪತಿ ಮುಂದೆಯೇ ಪತ್ನಿಯನ್ನು ತಬ್ಬಿಕೊಂಡ ಲೈಂಗಿಕ ದೌರ್ಜನ್ಯವೆಸಗಿದ ಹೇಯ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಜನವರಿ 15ರ ಮಧ್ಯರಾತ್ರಿ ಮಹಿಳೆ ಪತಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಹೇಯ ಕೃತ್ಯ ನಡೆದಿದ್ದು ಕೋಲ್ಕತ್ತ ಮೂಲದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಯಣ್ಣ ಬ್ರಿಗೇಡ್‌ ಬಗ್ಗೆ ಪಕ್ಷದ ವೇದಿಕೆಯಲ್ಲಿಯೇ ಚರ್ಚೆ: ಯಡಿಯೂರಪ್ಪ