Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನಿಂದ ರಾಜ್ಯ ಫುಲ್ ಅನ್ಲಾಕ್

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಸಿಎಂ ಬಿಎಸ್ ಯಡಿಯೂರಪ್ಪ ಅವರು ಮನವಿ ಮಾಡಿದರು.

webdunia
ಸೋಮವಾರ, 5 ಜುಲೈ 2021 (11:38 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ 27ನೇ ತಾರೀಕಿನಿಂದ ಮೇ 10 ನೇ ತಾರೀಕಿನ ತನಕ ಲಾಕ್ಡೌನ್ ಹೇರಲಾಗಿತ್ತು. ಆದರೆ ಇಷ್ಟಾದರೂ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿವಾಣಕ್ಕೆ ಬಾರದ ಕಾರಣ ಮತ್ತೆ ಮೇ 24 ರ ತನಕ ಲಾಕ್ಡೌನ್ ಅನ್ನು ರಾಜ್ಯ ಸರ್ಕಾರ ವಿಸ್ತರಿಸಿತ್ತು. ಅದಾದ ನಂತರ ಕೊಂಚ ರಿಲೀಫ್ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್ಲಾಕ್ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್ಲಾಕ್ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್ಲಾಕ್ ಘೋಷಣೆ ಮಾಡಿದೆ.
ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ. ಆದರೆ, ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ ಹೆಚ್ಚಾದ್ದಲ್ಲಿ ಮತ್ತೆ ಹಿಂದಿನ ನಿರ್ಬಂಧಗಳು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ಬರಲಿವೆ.
ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೋಮವಾರ (ಜುಲೈ 05)ದ ಬೆಳಿಗ್ಗೆ 5 ಗಂಟೆಯಿಂದ (ಜುಲೈ19) ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆಗಳು  ಹಾಗೂ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕೆ ಅವಕಾಶವಿಲ್ಲ?
1.         ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
2.         ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
3.         ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
4.         ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
5.         ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
6.         ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
7.         ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
8.         ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
9.         ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
10.       ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
11.       ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
12.       ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
13.       ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
14.       ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
ಸಿಎಂ ಹೇಳಿದ ಇತರ ಪ್ರಮುಖ ಅಂಶಗಳು
"ಜಿಲ್ಲೆಯಲ್ಲಿರುವ ಪರಿಸ್ಥಿತಿಗೆ  ಅನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು,"  ಸಿಎಂ ಬಿಎಸ್ ಯಡಿಯೂರಪ್ಪ ಅವರು ಮನವಿ ಮಾಡಿದರು

 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಮದುವೆಯಾದರೆ ಬೇರೆ ಮನೆಗೆ ಹೋಗ್ಬೇಕು,ಜೊತೆಗೇ ಇರಲು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡ ಅವಳಿಗಳು