Publish Date: Sun, 26 Nov 2017 (16:04 IST)
Updated Date: Sun, 26 Nov 2017 (16:10 IST)
ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾತನಾಡಿ, ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಚಂಪಾ ಹೇಳಿಕೆ ನೀಡಿದ್ದಾರೆ ಎನ್ನುವ ಪ್ತಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಕನ್ನಡ ನಾಡು, ನುಡಿ ಮತ್ತು ಗಡಿ ಸಮಸ್ಯೆಗಳು ಪರಿಹಾರ ಕಾಣದ ಹಿನ್ನೆಲೆ ಪ್ರಾದೇಶಿಕ ಪಕ್ಷದ ಅಗತ್ಯತೆಯ ಬಗ್ಗೆ ಅಥವಾ ಬೇರೊಂದು ಪಕ್ಷ ಬೆಂಬಲಿಸಲು ಈ ರೀತಿ ಹೇಳಿರಬಹುದು. ಈ ಬಗ್ಗೆ ಅನಗತ್ಯ ಗೊಂದಲ ಮೂಡಿಸುವುದು ಬೇಡ ಎಂದರು.
ಜೆಡಿಎಸ್ ಪಕ್ಷಕ್ಕೆ ನಿಷ್ಠರಾಗಿರುವ ಹಾಲಿ ಶಾಸಕರನ್ನು ಯಾವುದೇ ಕಾರಣಕ್ಕೂ ಅಸ್ಥಿರಗೊಳಿಸುವುದಿಲ್ಲ. ಹಾಲಿ ಶಾಸಕರು ಸ್ಪರ್ಧಿಸಬಾರದು ಎಂದು ವಿರೋಧಿಸುವ ಜೆಡಿಎಸ್ ನಾಯಕರಿಗೆ ಬೇರೆ ಕಡೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.