Select Your Language

Notifications

webdunia
webdunia
webdunia
webdunia

ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ
ಬೆಂಗಳೂರು , ಶುಕ್ರವಾರ, 23 ಜುಲೈ 2021 (12:41 IST)
Major Reservoir Water Level -July 23: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಜೂನ್ ತಿಂಗಳ ಅರ್ಧಕ್ಕೆ ಮಳೆ ಕೈಕೊಟ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಕಳೆದ ಕೆಲ ದಿನಗಳಿಂದ ಮಳೆ ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ.

ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದ್ರಾ ಡ್ಯಾಂ ಭರ್ತಿಯಾಗಿದ್ದು, ನಿನ್ನೆ ಕಾಳಿ ನದಿಗೆ 40 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲಾಯಿತು. ಈಗ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.
ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...
ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 25.58 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-29.49 ಟಿಎಂಸಿ
ಇಂದಿನ ಒಳಹರಿವು-20796 ಕ್ಯೂಸೆಕ್ಸ್ಇಂದಿನ ಹೊರಹರಿವು-4233 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 65.72 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.55 ಟಿಎಂಸಿ
ಇಂದಿನ ಒಳಹರಿವು-44320 ಕ್ಯೂಸೆಕ್ಸ್
ಇಂದಿನ ಹೊರಹರಿವು-3777 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.70 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-15.20 ಟಿಎಂಸಿ
ಇಂದಿನ ಒಳಹರಿವು-23129 ಕ್ಯೂಸೆಕ್ಸ್
ಇಂದಿನ ಹೊರಹರಿವು-20675 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 91.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-86.34 ಟಿಎಂಸಿ
ಇಂದಿನ ಒಳಹರಿವು-81202 ಕ್ಯೂಸೆಕ್ಸ್
ಇಂದಿನ ಹೊರಹರಿವು-117428 ಕ್ಯೂಸೆಕ್ಸ್
ಭದ್ರಾ ಜಲಾಶಯ
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 54.05 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-37.23 ಟಿಎಂಸಿ
ಇಂದಿನ ಒಳಹರಿವು- 39286 ಕ್ಯೂಸೆಕ್ಸ್
ಇಂದಿನ ಹೊರಹರಿವು-478 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಅಡಿ
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 38.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-25.41 ಟಿಎಂಸಿ
ಇಂದಿನ ಒಳಹರಿವು-53952 ಕ್ಯೂಸೆಕ್ಸ್
ಇಂದಿನ ಹೊರಹರಿವು-129 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಅಡಿ
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 24.83 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-16.69 ಟಿಎಂಸಿ
ಇಂದಿನ ಒಳಹರಿವು-33677 ಕ್ಯೂಸೆಕ್ಸ್
ಇಂದಿನ ಹೊರಹರಿವು-194 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.05 ಟಿಎಂಸಿ
ಇಂದಿನ ಒಳಹರಿವು-20871 ಕ್ಯೂಸೆಕ್ಸ್
ಇಂದಿನ ಹೊರಹರಿವು-410 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಅಡಿ
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 8.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.80 ಟಿಎಂಸಿ
ಇಂದಿನ ಒಳಹರಿವು-9252 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಅಡಿ
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-6.97 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.31 ಟಿಎಂಸಿ
ಇಂದಿನ ಒಳಹರಿವು-9783 ಕ್ಯೂಸೆಕ್ಸ್
ಇಂದಿನ ಹೊರಹರಿವು-14003 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ-554.4 ಅಡಿ
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 93.88 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-40.8 ಟಿಎಂಸಿ
ಇಂದಿನ ಒಳಹರಿವು-73431 ಕ್ಯೂಸೆಕ್ಸ್
ಇಂದಿನ ಹೊರಹರಿವು-2905 ಕ್ಯೂಸೆಕ್ಸ್
ಸೂಪಾ ಜಲಾಶಯ
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 78.48 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-48.5 ಟಿಎಂಸಿ
ಇಂದಿನ ಒಳಹರಿವು-86036 ಕ್ಯೂಸೆಕ್ಸ್
ಇಂದಿನ ಹೊರಹರಿವು-2166 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 27.68 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-30.96 ಟಿಎಂಸಿ
ಇಂದಿನ ಒಳಹರಿವು-117898 ಕ್ಯೂಸೆಕ್ಸ್
ಇಂದಿನ ಹೊರಹರಿವು-139228 ಕ್ಯೂಸೆಕ್ಸ್


Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿಯರಿಗೆ ಜೀಕಾ ಅಪಾಯ ಹೆಚ್ಚು!