Webdunia - Bharat's app for daily news and videos

Install App

ಸೋಲಿನ ಹೊಣೆ ಹೋರಲು ಸಿದ್ದ:ಎಸ್.ಎಂ.ಕೃಷ್ಣ

Webdunia
ಭಾನುವಾರ, 25 ಮೇ 2008 (13:15 IST)
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಕೂರಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.

ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್ ಸೋಲಿನ ಹೊಣೆ ಹೊರಲು ಸಿದ್ದವಾಗಿರುವುದಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದರು.

ಸೋಲನ್ನು ಒಪ್ಪಿಕೊಳ್ಳುತ್ತೇನೆ: ಆರ್.ವಿ. ದೇಶಪಾಂಡ ೆ

ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಸೋಲನ್ನು ಒಪ್ಪಿಕೊಂಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಯಾರೇ ಗೆಲ್ಲಲಿ ಕ್ಷೇತ್ರಕ್ಕೆ ಉತ್ತಮ ಕೆಲಸ ಮಾಡಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯರಿಗೆ ಗೆಲುವು
ವರುಣಾದಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗದ 7ರಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದ್ದಾರೆ. ಎರಡರಲ್ಲಿ ಕಾಂಗ್ರೆಸ್‌ಗೆ ಗೆಲುವು. ಶಿವಮೊಗ್ಗ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಈಶ್ವರಪ್ಪ ಗೆಲುವು ಸಾಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವು, ದೇವರ ಹಿಪ್ಪರಗಿಯಲ್ಲಿ ಬಿಜೆಪಿಯ ಬಸವರಾಜ್ ಯತ್ನಾಳ್ ಸೋಲನ್ನು ಅನುಭವಿಸಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಲ್ಲಿಕಾ ಪ್ರಸಾದ್ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿ ಶಕುಂತಳಾ ಶೆಟ್ಟಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಜಯ ಗಳಿಸಿದ್ದಾರೆ.

ಡಿಕೆಶಿ ಹಿನ್ನಡೆ: ಕನಕಪುರದಲ್ಲಿ ವಿಶ್ವನಾಥ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನ ಡಿ.ಕೆ. ಶಿವಕುಮಾರ್ ಹಿನ್ನಡೆ ಅನುಭವಿಸಿದ್ದಾರೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮಲವಿಸರ್ಜನೆ ವೇಳೆ ಹೊಟ್ಟೆ ನೋಯುತ್ತಿದ್ದರೆ ನಿರ್ಲ್ಯಕ್ಷ ಬೇಡ

ತಲೆ‌ಗೆ ಮಹೆಂದಿ ಹಚ್ಚುವುದರಿಂದ ಹಲವು ಪ್ರಯೋಜನ

ಒಣಗಿದ ಚರ್ಮಕ್ಕೆ ಹೊಳಪು ನೀಡಲು ಮೊಸರು, ಬನ್ಸಿ ಸ್ಕ್ರಬ್‌

ಬಜ್ಜಿ ಮಾಡಲು ಬಯಸುವ ಕಡಲೆ ಹಿಟ್ಟಿನಿಂದ ಸೌಂದರ್ಯಕ್ಕೆ ಹಲವು ಪ್ರಯೋಜನ

Show comments