ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಕೂರಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್ ಸೋಲಿನ ಹೊಣೆ ಹೊರಲು ಸಿದ್ದವಾಗಿರುವುದಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದರು.
ಸೋಲನ್ನು ಒಪ್ಪಿಕೊಳ್ಳುತ್ತೇನೆ: ಆರ್.ವಿ. ದೇಶಪಾಂಡೆ
ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಸೋಲನ್ನು ಒಪ್ಪಿಕೊಂಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಯಾರೇ ಗೆಲ್ಲಲಿ ಕ್ಷೇತ್ರಕ್ಕೆ ಉತ್ತಮ ಕೆಲಸ ಮಾಡಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯರಿಗೆ ಗೆಲುವು
ವರುಣಾದಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗದ 7ರಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದ್ದಾರೆ. ಎರಡರಲ್ಲಿ ಕಾಂಗ್ರೆಸ್‌ಗೆ ಗೆಲುವು. ಶಿವಮೊಗ್ಗ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಈಶ್ವರಪ್ಪ ಗೆಲುವು ಸಾಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವು, ದೇವರ ಹಿಪ್ಪರಗಿಯಲ್ಲಿ ಬಿಜೆಪಿಯ ಬಸವರಾಜ್ ಯತ್ನಾಳ್ ಸೋಲನ್ನು ಅನುಭವಿಸಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಲ್ಲಿಕಾ ಪ್ರಸಾದ್ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿ ಶಕುಂತಳಾ ಶೆಟ್ಟಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಜಯ ಗಳಿಸಿದ್ದಾರೆ.
ಡಿಕೆಶಿ ಹಿನ್ನಡೆ: ಕನಕಪುರದಲ್ಲಿ ವಿಶ್ವನಾಥ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನ ಡಿ.ಕೆ. ಶಿವಕುಮಾರ್ ಹಿನ್ನಡೆ ಅನುಭವಿಸಿದ್ದಾರೆ.