Webdunia - Bharat's app for daily news and videos

Install App

ಜೆಡಿಎಸ್‌ನಿಂದ ಸೂರ್ಯಕಾಂತ್ ನಾಗಮಾರಪಳ್ಳಿ ಸ್ಪರ್ಧೆ ಸಾಧ್ಯತೆ

Webdunia
ಶನಿವಾರ, 22 ಮಾರ್ಚ್ 2014 (13:45 IST)
PTI
ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬೀದರ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಎಚ್‌.ಡಿ.ಕುಮಾರಸ್ವಾಮಿ ಇಂಗಿತ ರಾಮನಗರದ ಜೆಡಿಎಸ್‌ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಟಿಕೆಟ್ ಸಿಗದ ಕಾರಣ ಅವರ ಬೆಂಬಲಿಗರು ಉದಗೀರ ರಸ್ತೆಯಲ್ಲಿರುವ ಬೀದರ್‌ ನಗರ ಬಿಜೆಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದರು. ಪಕ್ಷ ಹಾಗೂ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಬಿಜೆಪಿ ಕಚೇರಿ ಬಂದ್‌ ಆಗಿತ್ತು. ಕಚೇರಿಯ ಕಟ್ಟಡದ ಕಿಟಕಿಗಳತ್ತ ಕಲ್ಲು ತೂರಿದ ಪರಿಣಾಮ ಗಾಜುಗಳು ಪುಡಿಯಾದವು. ಅದೇ ಕಟ್ಟಡದ ಕೆಳಗಡೆ ಇದ್ದ ಪ್ಲಾಸ್ಟಿಕ್‌ ಕುರ್ಚಿಗಳನ್ನು ನೆಲಕ್ಕೆ ಅಪ್ಪಳಿಸಿ ಮುರಿದು ಹಾಕಿದರು.ಒಂದು ಹಂತದಲ್ಲಿ ರಸ್ತೆ ತಡೆ ನಡೆಸಿ ಟೈರ್‌ ಸುಡಲು ಯತ್ನಿಸಿದರಾದರೂ ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಮುಖಂಡ ಡಿ.ಕೆ. ಸಿದ್ರಾಮ, ಝರೆಪ್ಪಾ ಮಮದಾಪುರ ಮತ್ತಿತರರು ಇದ್ದರು.

ಬಂಡೇಳುವ ಸಾಧ್ಯತೆ: ಈ ಮಧ್ಯೆ ಸೂರ್ಯಕಾಂತ ನಾಗಮಾರಪಲ್ಲಿ ಬಂಡೆದ್ದು ಪಕ್ಷೇತರರಾಗಿ ಅಥವಾ ಜೆಡಿಎಸ್‌ ಅಭ್ಯರ್ಥಿಯಾಗಿ ಬೀದರ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬೀದರ್‌ನಲ್ಲಿ ಬೃಹತ್‌ ಸಮಾವೇಶ ಆಯೋಜಿಸುವುದಕ್ಕೂ ಅವರು ಸಿದ್ಧತೆ ನಡೆಸಿದ್ದಾರೆ. ಸೂರ್ಯಕಾಂತ ಅವರಿಗೇ ಟಿಕೆಟ್‌ ನೀಡಲು ರಾಜ್ಯದ ಮುಖಂಡರು ಒಪ್ಪಿ, ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದ್ದರು. ಆದರೆ ಹರಿಯಾಣ ಮೂಲದ ಯೋಗಗುರುವೊಬ್ಬರ ಒತ್ತಡಕ್ಕೆ ಮಣಿದ ಪಕ್ಷದ ದೆಹಲಿ ವರಿಷ್ಠರು ಸೂರ್ಯಕಾಂತ ಅವರ ಹೆಸರನ್ನು ಬದಲಿಸಿ, ಭಗವಂತ್ ಖೂಬಾ ಅವರಿಗೆ ಟಿಕೆಟ್‌ ಘೋಷಿಸಿದರು ಎನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments