Webdunia - Bharat's app for daily news and videos

Install App

ಬಿಜೆಪಿ ಸೇರಿದ ಹಿರಿಯ ಪತ್ರಕರ್ತ ಎಮ್ ಜೆ ಅಕ್ಬರ್

Webdunia
ಶನಿವಾರ, 22 ಮಾರ್ಚ್ 2014 (14:04 IST)
ಸಾರ್ವತ್ರಿಕ ಚುನಾವಣೆ 2014 ಸಮೀಪಿಸುತ್ತಿದ್ದು ಪ್ರತಿಯೊಂದು ರಾಷ್ಟ್ರೀಯ ಪಕ್ಷ ಬಲಿಷ್ಠ ಅಭ್ಯರ್ಥಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಹೊಂಚು ಹಾಕುತ್ತಿವೆ. ಭಾರತೀಯ ಜನತಾ ಪಕ್ಷ ಶನಿವಾರ ಹಿರಿಯ ಪತ್ರಕರ್ತ ಎಮ್ಎಲ್ ಅಕ್ಬರ್‌ರವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ.
PTI

ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಎಮ್ ಜೆ ಅಕ್ಬರ್‌ರವರನ್ನು ಇಂದು ಬಿಜೆಪಿಗೆ ಸೇರಿಸಿಕೊಂಡರು ಎಂದು ಮೂಲಗಳು ತಿಳಿಸಿವೆ.ಪತ್ರಕರ್ತ ಅಕ್ಬರ್ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಮಾಜಿ ಅಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಎನ್.ಕೆ. ಸಿಂಗ್ ಸಹ ಶನಿವಾರ ಬಿಜೆಪಿಯನ್ನು ಸೇರುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯಸಭೆಗೆ ಮರು ನಾಮಕರಣ ಮಾಡಿಲ್ಲವೆಂದು ನಿರಾಶೆಗೊಳಗಾಗಿದ್ದೇನೆ ಎಂಬ ಕಾರಣ ನೀಡಿ ಅವರು ನಿನ್ನೆ ಜೆಡಿ (ಯು) ತ್ಯಜಿಸಿದರು. ಪಕ್ಷ ನಾಮನಿರ್ದೇಶನವನ್ನು ನಿರಾಕರಿಸಿದ್ದಕ್ಕಾಗಿ ಅವರು ಕೋಪಗೊಂಡಿದ್ದರು .

ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿತಗೊಳಿಸುವುದರ ಮೂಲಕ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತಂದು ರಾಜ್ಯದ ಅಭಿವೃದ್ಧಿಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಿಂಗ್ ಶನಿವಾರ 3 ಗಂಟೆಗೆ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ನಿನ್ನೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments