Select Your Language

Notifications

webdunia
webdunia
webdunia
webdunia

ಮೋದಿ, ಮುಲಾಯಂರಿಂದ ಚುನಾವಣಾ ಮ್ಯಾಚ್‌ ಫಿಕ್ಸಿಂಗ್: ಮಾಯಾವತಿ ಆರೋಪ

ಮೋದಿ, ಮುಲಾಯಂರಿಂದ ಚುನಾವಣಾ ಮ್ಯಾಚ್‌ ಫಿಕ್ಸಿಂಗ್: ಮಾಯಾವತಿ ಆರೋಪ
ಲಕ್ನೋ , ಗುರುವಾರ, 20 ಮಾರ್ಚ್ 2014 (17:45 IST)
PTI
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಚುನಾವಣಾ ಫಿಕ್ಸಿಂಗ್‌ನಲ್ಲಿ ತೊಡಗಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 80 ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಮಾಯಾವತಿ, ಬ್ರಾಹ್ಮಣರು ಮತ್ತು ಮುಸ್ಲಿಮರು ಸೇರಿದಂತೆ ಮೇಲ್ಜಾತಿ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವುದು ಸ್ಪಷ್ಟವಾಗಿದೆ.

ಮಾಯಾವತಿ 80 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳಲ್ಲಿ 29 ಟಿಕೆಟ್‌ಗಳನ್ನು ಮೇಲ್ಜಾತಿಯವರಿಗೆ ನೀಡಿದ್ದಾರೆ. ಅದರಲ್ಲಿ 21 ಲೋಕಸಭೆ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದ ವ್ಯಕ್ತಿಗಳಿಗೆ ಟಿಕೆಟ್ ನೀಡಲಾಗಿದೆ. 19 ಮುಸ್ಲಿಮರು ಮತತ್ು 15 ಟಿಕೆಟ್‌ಗಳನ್ನು ದಲಿತರಿಗೆ ನೀಡಿದ್ದಾರೆ.

ಕಳೆದ 2007ರಲ್ಲಿ ದಲಿತ- ಬ್ರಾಹ್ಮಣ- ಮುಸ್ಲಿಮರನ್ನು ಒಗ್ಗೂಡಿಸಿ ನಡೆಸಿದ್ದ ತಂತ್ರ ಯಶಸ್ವಿಯಾಗಿ ಬಹುಜನ ಸಮಾಜ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವಂತೆ ಮಾಡಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಸೋಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಹಿತ ಸರಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಪ್ರತಿಯೊಂದು ಸಮುದಾಯಕ್ಕೆ ಅವಕಾಶ ಕಲ್ಪಿಸಿದ್ದೇನೆ. ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರದಲ್ಲಿ ಅಧಿಕಾರರೂಢವಾದ ಯುಪಿಎ ಸರಕಾರದ ಜನವಿರೋಧಿ ನೀತಿಗಳಿಂದ ದೇಶದ ಜನತೆ ನಿರಾಶರಾಗಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಪಕ್ಷಗಳು ಜಾತಿವಾದದ ಹೆಸರಲ್ಲಿ ವೋಟ್‌ಬ್ಯಾಂಕ್ ಪಡೆಯಲು ಪ್ರಯತ್ನಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.

Share this Story:

Follow Webdunia kannada