Webdunia - Bharat's app for daily news and videos

Install App

ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

Webdunia
ಬುಧವಾರ, 2 ಏಪ್ರಿಲ್ 2014 (17:34 IST)
PR
ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ರಾಯಬರೇಲಿ ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ 67 ವರ್ಷ ವಯಸ್ಸಿನ ಸೋನಿಯಾ ಗಾಂಧಿ, ತಮ್ಮ ಪುತ್ರ ರಾಹುಲ್ ಗಾಂಧಿಯೊಂದಿಗೆ ಆಗಮಿಸಿದರು.

ಸಮಾಜವಾದಿ ಪಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎದುರು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ. ಬಿಜೆಪಿ ಪಕ್ಷ ಸೋನಿಯಾ ವಿರುದ್ಧ ಸುಪ್ರೀಂಕೋರ್ಟ್ ವಕೀಲರಾದ ಅಜಯ್ ಅಗರ್‌ವಾಲ್ ಅವರನ್ನು ಕಣಕ್ಕಿಳಿಸಿದೆ. ಆಮ್ ಆದ್ಮಿ ಪಕ್ಷ ಇನ್ನೂ ಅಭ್ಯರ್ಥಿಯನ್ನು ಘೋಷಿಸಬೇಕಾಗಿದೆ.

ರಾಜಯಬರೇಲಿ ಲೋಕಸಭಾ ಕ್ಷೇತ್ರದ ಪ್ರೀತಿಯಿಂದ ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಜಯಭೇರಿ ಭಾರಿಸುವಲ್ಲಿ ನೆರವಾಗುತ್ತಾರೆ ಎಂದು ಸೋನಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಂದು ಮುಂಜಾನೆ ದೆಹಲಿಯಿಂದ ರಾಯಬರೇಲಿಗೆ ಆಗಮಿಸಿದ ಸೋನಿಯಾಗೆ ನಗರದ ಫುರ್ಸತ್‌ಗಂಜ್‌‍ ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರಿಂದ ಭಾರಿ ಸ್ವಾಗತ ದೊರೆಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments