Webdunia - Bharat's app for daily news and videos

Install App

ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲು ಉಮಾಭಾರತಿ ನಕಾರ

Webdunia
ಶುಕ್ರವಾರ, 28 ಮಾರ್ಚ್ 2014 (16:08 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲ್ಲ ಎಂದು ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಹೇಳಿದ್ದಾರೆ.

ಉತ್ತರಪ್ರದೇಶದ ಝಾನ್ಸಿ ಕ್ಷೇತ್ರದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಮಾಭಾರತಿ, ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟಲ್ಲಿ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಝಾನ್ಸಿಯಲ್ಲಿಯೇ ಲೋಕಸಭೆ ಚುನಾವಣೆ ಎದುರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಮಾಭಾರತಿ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಬಿಜೆಪಿ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದರು.

ಫೈರ್‌ಬ್ಯ್ರಾಂಡ್ ಉಮಾಭಾರತಿ ಝಾನ್ಸಿಯಲ್ಲಿ ಸ್ಪರ್ಧಿಸಿದಲ್ಲಿ ನೆರೆಯ ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ನೆರವಾಗಲಿದೆ ಎನ್ನುವುದು ಬಿಜೆಪಿ ಹೈಕಮಾಂಡ್ ತಂತ್ರವಾಗಿದೆ.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಲಿರುವ ಅಮೇಠಿ ಕ್ಷೇತ್ರದಲ್ಲಿ ಅವರ ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿಯವರನ್ನು ಕಣಕ್ಕಿಳಿಸಿಲು ತಂತ್ರ ರೂಪಿಸಿದೆ. ಆಮ್ ಆದ್ಮಿ ಪಕ್ಷದಿಂದ ಹಿಂದಿ ಕವಿ ಕುಮಾರ್ ವಿಶ್ವಾಸ್ ಚುನಾವಣೆ ಕಣದಲ್ಲಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments