Select Your Language

Notifications

webdunia
webdunia
webdunia
webdunia

ನಾಮಪತ್ರ ಸಲ್ಲಿಕೆ ಅಂತಿಮ ದಿನದಂದು ಘಟಾನುಘಟಿಗಳು ಕಣಕ್ಕೆ

ನಾಮಪತ್ರ ಸಲ್ಲಿಕೆ ಅಂತಿಮ ದಿನದಂದು ಘಟಾನುಘಟಿಗಳು ಕಣಕ್ಕೆ
ಬೆಂಗಳೂರು , ಗುರುವಾರ, 27 ಮಾರ್ಚ್ 2014 (13:51 IST)
PR
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರ ಸ್ವಾಮಿ, ಡಿ.ವಿ. ಸದಾನಂದಗೌಡ, ಕಾಂಗ್ರೆಸ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಜನಾರ್ದನ ಪೂಜಾರಿ, ರಮೇಶ್ ಜಿಗಜಿಣಿಗಿ ಸೇರಿದಂತೆ 225 ಹುರಿಯಾಳುಗಳು ಬುಧವಾರ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಬುಧವಾರ ಮಧ್ಯಾಹ್ನ 3ಗಂಟೆವರೆಗೆ ರಾಜ್ಯದ 28 ಕ್ಷೇತ್ರಗಳಿಂದ 225 ಅಭ್ಯರ್ಥಿಗಳಿಂದ 380 ನಾಮಪತ್ರಗಳು ಸಲ್ಲಿಸಿಕೆಯಾಗಿವೆ. ಇದರೊಂದಿಗೆ ಚುನಾವಣಾ ಸಮರಕ್ಕೆ ಧುಮುಕುವವರ ಸಂಖ್ಯೆ ಅಂತಿಮ ಘಟ್ಟಕ್ಕೆ ಬಂದಂತಾಗಿದೆ.

ಆದರೆ ಮಾರ್ಚ್ 29ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಅಂದು ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೊನೆ ದಿನ ಸಲ್ಲಿಕೆಯಾದ ನಾಮಪತ್ರಗಳೂ ಸೇರಿದಂತೆ ರಾಜ್ಯದಲ್ಲಿ ಈತನಕ 559 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 845 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದೂ ಅವರು ಹೇಳಿದರು.

Share this Story:

Follow Webdunia kannada