Select Your Language

Notifications

webdunia
webdunia
webdunia
webdunia

ದೇಶದ ರಾಜಕೀಯದಲ್ಲಿ ಬದಲಾವಣೆಯ ಗಾಳಿ: ಸಿಎಂ

ದೇಶದ ರಾಜಕೀಯದಲ್ಲಿ ಬದಲಾವಣೆಯ ಗಾಳಿ: ಸಿಎಂ
ಬೆಂಗಳೂರು , ಶುಕ್ರವಾರ, 16 ಮೇ 2014 (20:16 IST)
ನಮ್ಮ ನಿರೀಕ್ಷೆ ಹುಸಿಯಾಗಿದ್ದು, ದೇಶದ ರಾಜಕೀಯದಲ್ಲಿ ಬದಲಾವಣೆ ಬಯಸಿ ಜನತೆ ಮತ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
 
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಯ ಹಿನ್ನಲೆಯಲ್ಲಿ ಮಾತನಾಡಿದ ಸಿದ್ಧರಾಮಯ್ಯ ಅವರು, ದೇಶದಲ್ಲಿ ಬದಲಾವಣೆ ಬಯಸಿ ಪ್ರಜೆಗಳು ಜನಾದೇಶ ನೀಡಿದ್ದಾರೆ. ಜನತೆಯ ತೀರ್ಪನ್ನು ನಾನು ಗೌರವದಿಂದ ಸ್ವಾಗತಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.
 
ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ನೋಡಿ ಜನ ಮತನೀಡಿಲ್ಲ. ದೇಶದ ಹಿತಕ್ಕಾಗಿ ಜನತೆ ಮತ ನೀಡಿದ್ದಾರೆ. ನಾವು ನಿರೀಕ್ಷಿಸಿದಂತೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರೂ ಜನತಾ ಆದೇಶವನ್ನು ಸ್ವಾಗತಿಸುತ್ತೇವೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರು.
 
ಒಟ್ಟಾರೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗಿದ್ದು, ಮುಖ್ಯಮಂತ್ರಿಗಳ ಸ್ವಕ್ಷೇತ್ರ ಮೈಸೂರು ಕ್ಷೇತ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಕಳೆದ 2 ಬಾರಿ ಸಂಸದರಾಗಿದ್ದ ಎಚ್.ವಿಶ್ವನಾಥ್ ಅವರು ಸೋಲುಕಂಡಿದ್ದಾರೆ. ಇದು ಸಿದ್ಧರಾಮಯ್ಯ ಅವರಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ. ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 09 ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿದ್ದು, 17 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಅಲ್ಲದೆ ಸತತ 3 ದಶಕಗಳ ನಂತರ ಪಕ್ಷವೊಂದು ಕೇಂದ್ರದಲ್ಲಿ ಸ್ಪಷ್ಟ ಬಹುಮತ ಪಡೆದ ಕೀರ್ತಿಗೂ ಬಿಜೆಪಿ ಪಾತ್ರವಾಗಿದೆ.


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ  

http://elections.webdunia.com/karnataka-loksabha-election-results-2014.htm


Share this Story:

Follow Webdunia kannada