Webdunia - Bharat's app for daily news and videos

Install App

ಭಾವಿ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿಯಲ್ಲಿ ಭವ್ಯ ಸ್ವಾಗತ

Webdunia
ಶನಿವಾರ, 17 ಮೇ 2014 (15:31 IST)
ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಗಳಿಸಿದ ಬಿಜೆಪಿಯ ಭಾವಿ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಸಂತಸ ಸಂಭ್ರಮದಿಂದ ಸ್ವಾಗತಿಸಿದರು.  
 
ಮೋದಿ ಗುಜರಾತ್‌ನಿಂದ ಇಂದು ಬೆಳಿಗೆ 11 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನಿಲ್ದಾಣದ ಹೊರಗಡೆ ಬೆಳಿಗ್ಗೆಯಿಂದ ಕಾಯುತ್ತಿದ್ದ ಕಾರ್ಯಕರ್ತರು ಮೋದಿಯನ್ನು ಕಾಣುತ್ತಲೇ ಸಂತಸ ವ್ಯಕ್ತಪಡಿಸಿ ಬಿಜೆಪಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿದರು. 
 
ಮೋದಿ ನಮ್ಮ ಸಿಂಹ. ದೇಶದ ಜನತೆಗಾಗಿ ಕಾರ್ಯನಿರ್ವಹಿಸುತ್ತಾರೆ. ಅಭಿವೃದ್ಧಿಗಾಗಿ ಪ್ರತಿಯೊಬ್ಬ ಭಾರತೀಯನಿಗಾಗಿ ದುಡಿಯುತ್ತಾರೆ ಎಂದು ರಸ್ತೆಯ ಬದಿಯಲ್ಲಿರುವ ಅಂಗಡಿಯ ಮಾಲೀಕ ಓಂ ದತ್ತ್ ಘೋಷಣೆಗಳನ್ನು ಕೂಗಿದರು.
 
ಬ್ಲ್ಯೂ ಜಾಕೆಟ್ ಮತ್ತು ಶರ್ಟ್ ಧರಿಸಿದ್ದ ಮೋದಿ ಜನಸಮೂಹವನ್ನು ಕಂಡು ಕಾರಿನಿಂದ ಹೊರಬಂದು ಅಭಿಮಾನಿಗಳತ್ತ ಕೈ ಬೀಸಿದಾಗ ಅನೇಕ ಕಾರ್ಯಕರ್ತರು ಆ ದೃಶ್ಯವನ್ನು ಮೊಬೈಲ್‌‌ಗಳಲ್ಲಿ ಸೆರೆಹಿಡಿದರು. 
 
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೊಸ ಉದ್ಯೋಗ ಸೃಷ್ಠಿ, ಅಭಿವೃದ್ಧಿ ಮತ್ತು ಪಾರದರ್ಶಕ ಸರಕಾರ ನೀಡುವ ಭರವಸೆಗೆ ಸ್ಪಂದಿಸಿದ ಜನತೆ 30 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments