Webdunia - Bharat's app for daily news and videos

Install App

ಹೀನಾಯ ಸೋಲು: ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಪ್ರಧಾನಿ ಸಿಂಗ್

Webdunia
ಶನಿವಾರ, 17 ಮೇ 2014 (15:11 IST)
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಸಂಸದೀಯ ಖಾತೆ ವ್ಯವಹಾರಗಳ ಖಾತೆ ಸಚಿವ ಕಮಲ್‌ನಾಥ್ ಅವರೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಸಲ್ಲಿಸಿದ್ದಾರೆ.   
 

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಕ್ಕೆ ಒಂದು ದಿನ ಮುನ್ನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಸೇರಿ 15ನೇ ಲೋಕಸಭೆಯನ್ನು ವಿಸರ್ಜಿಸುವ ಮಸೂದೆಗೆ ಅಂಗೀಕಾರ ನೀಡಲಾಯಿತು. ಪ್ರಧಾನಿ ಮನಮೋಹನ್ ಸಿಂಗ್ ವಿದಾಯದ ಭಾಷಣದಲ್ಲಿ ಬೆಂಬಲ ನೀಡಿದ ದೇಶದ ಜನತೆಗೆ ಅಭಿನಂದಿಸಿದರು.    
 

ಕಳೆದ 10 ವರ್ಷಗಳ ಅವಧಿಯಲ್ಲಿ ನಿಷ್ಪಕ್ಷಪಾತದಿಂದ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ. ನನಗೆ ಸಹಕಾರ ನೀಡಿದ ನಿಮ್ಮೆಲ್ಲರಿಗೆ ಧನ್ಯವಾದಗಳು. ಮುಂಬರುವ ದಿನಗಳಲ್ಲಿ ಭಾರತ ವಿಶ್ವದ ಭೂಪುಟದಲ್ಲಿ ಉತ್ತಮ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದರು. 
 

ದೇಶದ ಜನತೆ ಬಿಜೆಪಿ ನೇತೃತ್ವದ ಮೋದಿ ಸರಕಾರವನ್ನು ಬೆಂಬಲಿಸಿ ಮತ ನೀಡಿದ್ದಾರೆ. ಮತದಾರರ ತೀರ್ಪನ್ನು ಗೌರವಿಸುತ್ತೇನೆ. ನನ್ನ ಜೀವನ ತೆರೆದ ಪುಸ್ತಕದಂತಿದೆ. ನನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ದೇಶಕ್ಕೆ ಅಳಿಲು ಸೇವೆ ಸಲ್ಲಿಸಿದ್ದೇನೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments