Publish Date: Tue, 02 Apr 2019 (17:05 IST)
Updated Date: Tue, 02 Apr 2019 (17:07 IST)
ಬೃಹತ್ ಮೆರವಣಿಗೆ ಮೂಲಕ ತೆರಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈಶ್ವರ್ ಖಂಡ್ರೆ ಬೃಹತ್ ರ್ಯಾಲಿ ಮೂಲಕ ತೆರಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬೀದರ್ ನಗರದ ಬಸವೇಶ್ವರ ವೃತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹೀಂ ಖಾನ್, ಅಜಯ್ ಸಿಂಗ್, ಎಂಎಲ್ಸಿ ವಿಜಯ ಸಿಂಗ್, ಮಾಜಿ ಶಾಸಕ ಅಶೋಕ್ ಖೇಣಿ, ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಮುಖಂಡರು ಭಾಗಿಯಾದ್ರು.
ರ್ಯಾಲಿ ಬಳಿಕ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು ಈಶ್ವರ್ ಖಂಡ್ರೆ.