Publish Date: Sat, 13 Apr 2019 (19:33 IST)
Updated Date: Sat, 13 Apr 2019 (19:35 IST)
ಜೆಡಿಎಸ್ ಪಕ್ಷದಿಂದಲೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ ಅಂತ ಸಿಎಂ ಹೇಳಿದ್ದಾರೆ.
ಮತದಾರರು ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡದೇ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ವಿ.ಮುನಿಯಪ್ಪ ಅವರನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿಮಾಡಿದರು.
ಕೋಲಾರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು,
ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದಲೇ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಕೋಲಾರದಲ್ಲಿ ವಿ.ಮುನಿಯಪ್ಪ ಅವರನ್ನು ಗೆಲ್ಲಿಸಬೇಕು ಎಂದರು.
ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರದಲ್ಲಿ ಸರ್ಕಾರ ರಚನೆಯಾಗಲಿದೆ
ಎಂದು ಕುಮಾರಸ್ವಾಮಿ ಹೇಳಿದರು.