ಚಪ್ಪಲಿ ಪಾಲಿಟಿಕ್ಸ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?

Webdunia
ಸೋಮವಾರ, 1 ಏಪ್ರಿಲ್ 2019 (06:43 IST)
ಮಂಡ್ಯ : ಸುಮಲತಾ ಅಂಬರೀಶ್‌ ಅವರು ತನ್ನ ಗನ್​​ ಮ್ಯಾನ್​​​ ಗೆ ಚಪ್ಪಲಿ ತಗೆದುಕೊಡುವಂತೆ ಸೂಚಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಬಾರೀ ಚರ್ಚೆಗೆ ಕಾರಣವಾಗಿದೆ.


ಮನೆಯಿಂದ ಹೊರಬರುತ್ತಿದ್ದಂತೆಯೇ ಸುಮಲತಾ ತಮ್ಮ ಚಾಲಕನಿಗೆ ಕೆಳಗೆ ಏನೋ ತೋರಿಸುವ ಮೂಲಕ ಸೂಚಿಸುತ್ತಾರೆ. ಆಗ ಚಾಲಕ ಕೆಳಗೆ ಬಗ್ಗಿ ಸುಮಲತಾ ಕಾಲಿಗೆ ಚಪ್ಪಲಿ ತೊಡಿಸಿದ್ದಾರೆ. ಇತ್ತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಹಾಕಲು ಬಂದಾಗ ನಿಖಿಲ್  ತಡೆದು ತಾನೇ ಚಪ್ಪಲಿ ಹಾಕಿಕೊಂಡು ಅವರನ್ನು ಮುಟ್ಟಿ ಕೈ ಮುಗಿದಿರುವ ವಿಡಿಯೋ ಜೊತೆಗೆ ಸುಮಲತಾರ ದೃಶ್ಯಗಳನ್ನು ಹೊಂದಿಸಿ ಹರಿಬಿಡಲಾಗಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಮಾರ್ಚ್ 20 ರಂದು ನಾಮಪತ್ರ ಸಲ್ಲಿಸಲು ಮನೆಯಿಂದ ಹೊರ ಹೋಗುತ್ತಿರುವ ಸಂದರ್ಭದ ಕೆಲ ದೃಶ್ಯಗಳು ವೈರಲ್ ಆಗಿವೆ. ನಾನು ಮತ್ತು ಪುತ್ರ ಅಭಿಷೇಕ್ ಭದ್ರತೆಗಾಗಿ ಗನ್ ಮ್ಯಾನ್ ಗಳನ್ನು ಇಟ್ಟುಕೊಂಡಿಲ್ಲ. ನಾಮಪತ್ರ ಸಲ್ಲಿಸಿದ ಬಳಿಕ ಭದ್ರತೆಗಾಗಿ ಇದೀಗ ಇಬ್ಬರು ಗನ್ ಮ್ಯಾನ್ ಗಳನ್ನು ನೇಮಕ ಮಾಡಲಾಗಿದೆ. ಅಂದು ಚಪ್ಪಲಿಯನ್ನು ನನಗೆ ನಮ್ಮ ಡ್ರೈವರ್ ನೀಡಿದ್ದರು. ನನ್ನ ಬಗ್ಗೆ ಮಾತನಾಡಲು ಕೆಲವರಿಗೆ ಏನೂ ಸಿಗದೇ ಜಿಗುಪ್ಸೆಯಿಂದ ಈ ರೀತಿಯ ವಿಡಿಯೋಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments