Publish Date: Mon, 01 Apr 2019 (10:16 IST)
Updated Date: Mon, 01 Apr 2019 (10:18 IST)
ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಪರ ಇಂದಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಇಳಿಯಲಿದ್ದು, ನಾಳೆಯಿಂದ ರಾಕಿಂಗ್ ಸ್ಟಾರ್ ಯಶ್ ಎಂಟ್ರಿಯಾಗಲಿದೆ.
ಇಂದು ಮಂಡ್ಯದಲ್ಲಿ ದರ್ಶನ್ ಸುಮಲತಾಗೆ ಸಾಥ್ ನೀಡಲಿದ್ದಾರೆ. ನಾಳೆಯಿಂದ ರಾಕಿಂಗ್ ಸ್ಟಾರ್ ಯಶ್ ಕೂಡಾ ಜತೆಯಾಗಲಿದ್ದಾರೆ. ನಾಳೆ ಬೆಳಿಗ್ಗೆ ರಾಕಿಂಗ್ ಸ್ಟಾರ್ ಯಶ್ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 8ರವರೆಗೆ ವಿವಿದೆಡೆ ಪ್ರಚಾರ ನಡೆಸಲಿದ್ದಾರೆ.
ಇನ್ನು, ಸುಮಲತಾಗೆ ಬೆಂಬಲ ಘೋಷಿಸಿರುವ ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಕೂಡಾ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಮಂಡ್ಯ ರಣಕಣ ಮತ್ತಷ್ಟು ಸ್ಟಾರ್ ಗಳಿಂದ ರಂಗೇರಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ