Webdunia - Bharat's app for daily news and videos

Install App

ಆಂಬುಲೆನ್ಸ್, ಪೊಲೀಸ್ ವಾಹನ ತಪಾಸಣೆಗೆ ಖಡಕ್ ಸೂಚನೆ

Webdunia
ಮಂಗಳವಾರ, 16 ಏಪ್ರಿಲ್ 2019 (15:25 IST)
ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಅನಗತ್ಯ ಆರೋಪಗಳಿಗೆ ಅವಕಾಶ ನೀಡದಿರಲು ಹಾಗೂ ಚುನಾವಣಾ ಪ್ರಕ್ರಿಯೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಆಂಬುಲೆನ್ಸ್ ಹಾಗೂ ಪೊಲೀಸ್ ವಾಹನಗಳನ್ನೂ ಒಳಗೊಂಡಂತೆ ಎಲ್ಲಾ ಸರ್ಕಾರಿ ವಾಹನಗಳನ್ನೂ ತಪಾಸಣೆಗೊಳಪಡಿಸಲು ಸೂಚಿಸಲಾಗಿದೆ.

ಬೆಂಗಳೂರು ನಗರದ ಮೂರೂ ಲೋಕಸಭಾ ಕ್ಷೇತ್ರಗಳಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ನಿಯೋಜಿತರಾಗಿರುವ ವಿಶೇಷಾಧಿಕಾರಿಗಳೂ ಆಗಿರುವ ಭೂ ಕಂದಾಯ ಮತ್ತು ಭೂಮಾಪನಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗೀಲ್ ಈ ಸೂಚನೆ ನೀಡಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಚನಾಧಿಕಾರಿ ಡಾ ಲೋಕೇಶ್ ಅವರ ಸಮ್ಮುಖದಲ್ಲಿ ನಡೆದ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪ್ರತಿನಿಧಿಗಳ ಸಭೆಯಲ್ಲಿ ಎಲ್ಲಾ ರೀತಿಯ ಅಕ್ರಮಗಳನ್ನು ತಡೆಯಲು ಮುಂದಿನ ಮೂರು ದಿನಗಳಲ್ಲಿ ದಿನದ 24 ಗಂಟೆಯೂ ನಿಗಾ ಇಡಲಾಗುವುದು. ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಚುನಾವಣಾ ಪಾವಿತ್ರ್ಯತೆಗೆ ಧಕ್ಕೆ ಬರುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments