ಬಿಜೆಪಿಯವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಕೊಂದವರು- ಬಿ.ವಿ.ನಾಯಕ್ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 8 ಏಪ್ರಿಲ್ 2019 (09:09 IST)
ಯಾದಗಿರಿ : ಬಿಜೆಪಿಯವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಕೊಂದವರು. ಅಂತವರಿಂದ ನಾನು ದೇಶಾಭಿಮಾನದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆಯ ಸಾಧನೆಯನ್ನು ರಾಜಕೀಯಕ್ಕೆ ಬಳಿಸಿಕೊಳ್ಳುವುದು ಸರಿಯಲ್ಲ. ಆರ್ಥಿಕ, ಸಾಮಾಜಿಕ ಸೇರಿದಂತೆ ಯಾವುದೇ ವಿಚಾರದಲ್ಲಿಯೂ ಪಾಕಿಸ್ತಾನ ನಮಗೆ ಸಮಾನವಾಗಿಲ್ಲ. ಬಿಜೆಪಿಯವರು ಪಾಕಿಸ್ತಾನದ ಹೆಸರನ್ನು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ತಪ್ಪು ಎಂದು ನಾನು ಈಗಾಗಲೇ ಅನೇಕ ಬಾರಿ ಹೇಳಿದ್ದೇನೆ ಎಂದು ಹೇಳಿದ್ದಾರೆ.

 

ಅಲ್ಲದೇ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗಿ ಎಂದು ವರ್ಣನೆ ಮಾಡಿದರು. ಇಂದಿರಾ ಗಾಂಧಿ ಅವರು ಪಾಕಿಸ್ತಾನಕ್ಕೆ ಅನೇಕ ಬಾರಿ ಉತ್ತರ ನೀಡಿದ್ದಾರೆ. ಆದರೆ ಅವರು ಸೇನೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments