Publish Date: Sun, 14 Apr 2019 (16:21 IST)
Updated Date: Sun, 14 Apr 2019 (16:23 IST)
ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಎದುರಲ್ಲೇ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲ, ಮೋದಿ ಚೌಕಿದಾರ್ ಎಂದು ಕೂಗಿದ ಘಟನೆ ನಡೆದಿದೆ.
ಬೀದರ್ ನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಪ್ರಚಾರದಲ್ಲಿ ತೊಡಗಿದ್ದಾಗ ಅದೇ ಮಾರ್ಗ ಮದ್ಯದಲ್ಲಿ ಬಂದ ಮಾಜಿ ಶಾಸಕ ಅಶೋಕ್ ಖೇಣಿ ಎದುರು ಬಿಜೆಪಿ ಕಾರ್ಯಕರ್ತರು ಮೋದಿ ಚೌಕಿದಾರ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿರ್ಣಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿರ್ಣಾ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಪ್ರಚಾರದಲ್ಲಿ ತೊಡಗಿದ್ದಾಗ ಪಕ್ಕದ ಮುತ್ತಂಗಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನೈಸ್ ಖ್ಯಾತಿಯ ಅಶೋಕ್ ಖೇಣಿ ಮುಂದೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಕೂಗಿದರು.
ಬಿಜೆಪಿ ಕಾರ್ಯಕರ್ತರು ಮೋದಿ ಎಂದ ತಕ್ಷಣ ನಗು ಮುಖದಿಂದಲೆ ಖೇಣಿ ಅಲ್ಲಿಂದ ಕಾಲು ಕಿತ್ತರು.